ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಭಾರೀ ಗಾಳಿಯೊಂದಿಗೆ ಬಿಟ್ಟು-ಬಿಟ್ಟು ಸುರಿಯುತ್ತಿರುವ ಮಳೆಯಿಂದ ಮುಂಜಾಗೃತ ಕ್ರಮವಾಗಿ ಸರ್ಕಾರಿ-ಖಾಸಗಿಯ 1 ರಿಂದ 10ನೇ ತರಗತಿಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಕಳಸ ತಾಲೂಕಿನ ಅಂಗನವಾಡಿ ಸೇರಿದಂತೆ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ:
ಇನ್ನು ಕಳಸ ತಾಲೂಕಿನ ಅಂಗನವಾಡಿ ಸೇರಿದಂತೆ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ತಡವಾಗಿ ಶಾಲೆಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಶಾಲೆಗೆ ವಿದ್ಯಾರ್ಥಿಗಳು ಆಗಮಿಸಿ ನಂತರ ವಾಪಸ್ಸಾಗಿದ್ದಾರೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಮನವಿ ಸ್ವೀಕರಿಸಿ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಶೀಘ್ರ ಕ್ರಮ ವಹಿಸುವಂತೆ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.












