Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್‍ನಲ್ಲಿ ಬುಧವಾರ ಸಂಜೆ ನಡೆದಿದೆ.

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‍ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿಕ್ಕಮಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶೃಂಗೇರಿಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ನಡೆಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಅಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಶಾಸಕರಾದ ಟಿ.ಡಿ ರಾಜೇಗೌಡ ಉದ್ಘಾಟಿಸಿದರು.

 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಭಾರತೀಯ ಪರಂಪರೆಯಲ್ಲಿ ಗುರು- ಶಿಷ್ಯರ ನಡುವಿನ ಸಂಬಂಧವು ಮಹತ್ತರವಾದುದು, ಗುರು ಎಂದರೆ ಅಜ್ಞಾನ ಹೋಗಲಾಡಿಸಿ, ಜ್ಞಾನದನ್ನು ನೀಡಿ ಸನ್ಮಾರ್ಗದ ದಾರಿ ತೋರುವವರು, ಎಲ್ಲರೂ ಗುರುವಿನ ಮಾರ್ಗದರ್ಶನದಲ್ಲಿ ನಡೆದಲ್ಲಿ ಸುಸಂಸ್ಕೃತ ಸಮಾಜ ಕಟ್ಟಲು ಸಾಧ್ಯ ಎಂದರು.

ಜಾತಿ, ಧರ್ಮವನ್ನು ಮೀರಿದ ಕುಲವೇ ಗುರುಕುಲ, ಈಗಿನ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಯೋಚನೆಯೇ ಬೇರೆ, ಇಲಾಖಾಧಿಕಾರಿಗಳ ಯೋಜನೆಯೇ ಬೇರೆಯಾಗಿದೆ. ಕಲಿಸುವ ಇಚ್ಚಾಶಕ್ತಿ ಶಿಕ್ಷಕನಲ್ಲಿ ಮತ್ತು ಕಲಿಯುವ ಇಚ್ಚಾಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು. ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದ ವೃತ್ತಿ ಎಂದು ಪ್ರೊ.ಕೆ. ಶ್ರೀಪತಿ ಅವರು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.

 

ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಉಪಾಧ್ಯಕ್ಷೆ ಸುನೀತಾ, ಸದಸ್ಯರಾದ ಮಮತಾ ಉದಯ್, ಪ್ರಫುಲ್ಲ, ಮಂಜುನಾಥ್, ಮರ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್.

ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ರಂಗನಾಥ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್ .ಜಿ ರಾಘವೇಂದ್ರ, ಜಿಲ್ಲಾ ನೋಡಲ್ ಅಧಿಕಾರಿ ಸತೀಶ್, ತಾಲ್ಲೂಕು ನೋಡಲ್ ಅಧಿಕಾರಿ ವಿಜಯ್ ಕುಮಾರ್, ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.