
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಆಗುಂಬೆ ಸಮೀಪದ ಕೌರಿಹಣ್ಣು ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಚೇತನ್ (28) ಎಂದು ಗುರುತಿಸಲಾಗಿದೆ.
ಒಟ್ಟು ಐವರು ಮೆಡಿಕಲ್ ವಿದ್ಯಾರ್ಥಿಗಳು ಕಾರಿನಲ್ಲಿ ಆಗುಂಬೆ ಪ್ರವಾಸಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನಿಗೆ ನಿದ್ರೆ ಮಂಪರು ಆವರಿಸಿ ವಾಹನ ನಿಯಂತ್ರಣ ತಪ್ಪಿರಬಹುದು ಎನ್ನಲಾಗಿದ್ದು, ಕಾರು ರಸ್ತೆಯಿಂದ ಕೆಳಗಿಳಿದು ಅಪ್ಪಳಿಸಿ ಭೀಕರ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಚೇತನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















