ಕಡೂರು: ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವೆಂಕಟೇಶ (58) ಮತ್ತು ಪರಶುರಾಮ (20) ಬಂಧಿತ ಆರೋಪಿಗಳು.

ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಆರ್ ವಿಜಯ್ ಕುಮಾರ್ ಅವರ ಮನೆಯಲ್ಲಿ ಕಳೆದ ತಿಂಗಳು ಕಳ್ಳತನ ನಡೆದಿದ್ದು, ಈ ಸಂಬಂಧ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣದ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿಟಿ ಮತ್ತು ತರೀಕೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್. ಪರಶುರಾಮಪ್ಪ ಅವರ ಮಾರ್ಗದರ್ಶನದಲ್ಲಿ ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 1,60,000 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ

ಈ ಪ್ರಕರಣದ ಪತ್ತೆ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ವಿದ್ಯಾ ಕೆಜೆ, ಸಚಿತ್ ಕುಮಾರ್ ಜಿಆರ್, ಧನಂಜಯ್ ಡಿಹೆಚ್, ಲೀಲಾವತಿ ಹಾಗೂ ಎಎಸ್‌ಐ ವೇದಮೂರ್ತಿ ಸೇರಿದಂತೆ ಸಿಬ್ಬಂದಿಗಳಾದ ಮಧು ಕುಮಾರ್ ಜಿಕೆ, ಅಂಗರಾಜು, ಶಶಿಕುಮಾರ್, ಹರೀಶ ಬಿ.ಸಿ, ಸ್ವಾಮಿ ಎ.ಓ, ಧನಪಾಲ ನಾಯ್ಕ, ಮಂಜುನಾಥ್ ಕೆಎಸ್ ಹಾಗೂ ಜಿಲ್ಲಾ ಪೊಲೀಸ್ ಘಟಕದ ಸತೀಶ್ ಕುಮಾರ್, ಕುಮಾರಪ್ಪ ಎಟಿ ಮತ್ತು ಶಿವಕುಮಾರ್ ಭಾಗವಹಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.