ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಸೀಜ್‌!

ಹಾಸನ: (ನ್ಯೂಸ್ ಮಲ್ನಾಡ್ ವರದಿ)  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದಕ್ಕೆ ನಿರ್ದೇಶನವೆಂಬಂತೆ ಹಾಸನ ತಾಲೂಕಿನ ದೊಡ್ಡ ಆಲದಹಳ್ಳಿ ಗ್ರಾಮದಲ್ಲಿ ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಸೀಜ್‌ ಮಾಡಿದ್ದಾರೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ


ಹಾಸನ ತಾಲೂಕಿನ ದೊಡ್ಡ ಆಲದಹಳ್ಳಿ ಗ್ರಾಮದಲ್ಲಿ ಮಂಜೇಗೌಡ ಎನ್ನುವವರು ಆಧಾರ್ ಹೌಸಿಂಗ್ ಫೈನಾನ್ಸ್ ನಿಂದ 9 ಲಕ್ಷ ಸಾಲ ಪಡೆದಿದ್ದರು. ಶಾಲಾ ಮರುಪಾವತಿ ಮಾಡದಿದ್ದಕ್ಕೆ ಫೈನಾನ್ಸ್ ಸಿಬ್ಬಂದಿಗಳು ಗೃಹಪ್ರವೇಶಕ್ಕೂ ಮುನ್ನವೆ ಬೀಗ ಹಾಕಿದ್ದಾರೆ.

ಮನೆ ನಿರ್ಮಾಣದ ವೇಳೆ ಮಗನಿಗೆ ಅಪಘಾತವಾಗಿ ಕುಟುಂಬಸ್ಥರಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಹೀಗಾಗಿ ಸಾಲ ಕಟ್ಟಲಾಗದೆ ಕುಟುಂಬ ತೀವ್ರ ತೊಂದರೆ ಅನುಭವಿಸಿತ್ತು. ಕರುಣೆ ತೋರದೆ ಫೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಹಾಕಿದ್ದಾರೆ. ಹೀಗಾಗಿ ಆರು ತಿಂಗಳಿನಿಂದ ಮಂಜೇಗೌಡ ಕುಟುಂಬ ದನದ ಕೊಟ್ಟಿಗೆಯಲ್ಲಿ ಜೀವನ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


ಈ ಕುರಿತು ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ರೈತ ಸಂಘದ ಮುಖಂಡರು ಗ್ರಾಮಕ್ಕೆ ತೆರಳಿ ಮನೆಗೆ ಹಾಕಿದ್ದ ಬೀಗವನ್ನು ಒಡೆದು ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸರ್ಕಾರದಿಂದ ಗ್ರಾಮ ಪಂಚಾಯತ್‌ಗಳಿಗೆ ಹೊಸ ನಿಯಮ ಜಾರಿ; ಏನದು ನಿಯಮ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.