ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗೃಹಿಣಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಂಪುರ ಗ್ರಾಮದ ಕಾಫಿ ಉದ್ಯಮಿ ರಾಜೇಶ್ ಅವರ ಪತ್ನಿ ಸುಮಾ (45) ಮೃತ ದುರ್ದೈವಿ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾ, ಬುಧವಾರ ಏಕಾಏಕಿ ಮನೆಯೊಳಗಿಂದ ಹೊರಬಂದು ಮನೆಯ ಮುಂಭಾಗದಲ್ಲೇ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಳ್ಳಲಾಗಿದೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.












