ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಹೃದಯಾಘಾತದಿಂದ 50 ವರ್ಷದ ಗೃಹಿಣಿ ಲಲಿತಾ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮನೆ ಬಾಗಿಲ ಬಳಿ ಲಲಿತಾ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಘಟನೆಯ ಸಮಯದಲ್ಲಿ ಗೃಹಿಣಿ ಲಲಿತಾ ಮನೆಯಲ್ಲಿಯೇ ಒಂಟಿಯಾಗಿದ್ದರು. ಅವರ ಪತಿ ಗೋಪಾಲ್ ರಾತ್ರಿ ಕಾರು ಬಾಡಿಗೆಗಾಗಿ ಮನೆ ಬಿಟ್ಟು ಹೊರ ಹೋಗಿದ್ದರು. ಪಕ್ಕದ ಮನೆಯವರು ಬೆಳಗ್ಗೆ ಶವವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!
ಮೃತಳ ಪೋಷಕರು ಪತಿ ಗೋಪಾಲ್ ಅವರೇ ಹತ್ಯೆ ಮಾಡಿರಬಹುದು ಎಂಬ ಶಂಕೆಯೊಂದಿಗೆ ಪೊಲೀಸರಿಗೆ ದೂರು ನೀಡಿದ್ದರು. ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತವೇ ಸಾವಿಗೆ ಕಾರಣ ಎಂದು ವೈದ್ಯಕೀಯ ವರದಿ ಸ್ಪಷ್ಟಪಡಿಸಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಗಮನಕ್ಕೆ; ಗೌರವಧನ ಪಾವತಿಗೆ ಅನುದಾನ ಬಿಡುಗಡೆ












