ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ಮಹಿಳೆಯನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ವಾಟೆಕಾನ್ ಹೊಸಕೆರೆ ಗ್ರಾಮದ ನಿವಾಸಿ ಜನಾರ್ಧನ (38) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

ಆರೋಪಿ ಜನಾರ್ಧನ ಕಳೆದ ಮಂಗಳವಾರ ಅರೇನೂರು ಗ್ರಾಮದ ತನ್ನ ತಂದೆ ತಾಯಿ ಮನೆಯಲ್ಲಿ ವಾಸವಿದ್ದ ಸಂಧ್ಯಾ ಎಂಬಾಕೆಯ ಮನೆಗೆ ಬಂದು ಸಂಧ್ಯಾಳ ಕುತ್ತಿಗೆಗೆ ಮಾರಕಾಸ್ತ್ರದಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಆಲ್ದೂರು ಪೊಲೀಸರು ಆರೋಪಿಯ ಬಂಧನಕ್ಕೆ ತನಿಖೆ ಆರಂಭಿಸಿ ಗುರುವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
ಸಂಧ್ಯಾಳಿಗೆ 3 ವರ್ಷಗಳ ಹಿಂದೆ ವಿವಾಹವಾಗಿದ್ದು, ಮೂವರು ಮಕ್ಕಳಿದ್ದಾರೆ. ಆದರೆ, ಗಂಡನಿಂದ ಬೇರೆಯಾಗಿದ್ದ ಸಂಧ್ಯಾ ಅರೇನೂರು ಗ್ರಾಮದಲ್ಲಿದ್ದ ತನ್ನ ತವರು ಮನೆಗೆ ಬಂದು ಅಲ್ಲಿಯೇ ವಾಸವಾಗಿದ್ದಳು. ಅಲ್ಲದೇ ತನ್ನ ಅತ್ತೆಯ ಮಗ ಜನಾರ್ಧನ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳೆಂದು ತಿಳಿದು ಬಂದಿದ್ದು, ಅನೈತಿಕ ಸಂಬಂಧವೇ ಸಂಧ್ಯಾಳ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












