ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದುರಂತವೊಂದರಲ್ಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕುರುಬರಹಳ್ಳಿ ಬಳಿ ಇರುವ ವಿದ್ಯಾ ಕಾಫಿ ಕ್ಯುರಿಂಗ್ನಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಈ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 10 ಸಾವಿರ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು? ಇಲ್ಲಿದೆ ಡಿಟೈಲ್ಸ್

ಬಾಯ್ಲರ್ ರಿಪೇರಿ ಮಾಡುವಾಗ ಏಕಾಏಕಿ ಶಾಖವು ಹೊರಹೊಮ್ಮಿದ ಪರಿಣಾಮ ರಿಪೇರಿ ಮಾಡುತ್ತಿದ್ದ ಕಾರ್ಮಿಕನ ದೇಹ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲೇ ಉದಯ್ (27) ಮೃತಪಟ್ಟಿದ್ದಾನೆ. ಉದಯ್ ಮೂಲತಃ ಮಡಿಕೇರಿಯ ಕುಶಾಲನಗರ ಮೂಲದವನು.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮ ಜಾರಿ
ಬಾಯ್ಲರ್ ಸರಿಪಡಿಸುವಾಗ ಏಕಾಏಕಿ 340 ಡಿ.ಸೆ ಶಾಖ ಹೊರ ಬಂದಿದೆ. ಶಾಖದ ತೀವ್ರತೆಗೆ ಉದಯ್ ದೇಹ ಸುಟ್ಟು ಕರಕಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಶವಗಾರದ ಬಳಿ ಕಾಫಿ ಕ್ಯುರಿಂಗ್ ಕಾರ್ಮಿಕರು ಜಮಾಯಿಸಿದ್ದರು. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.












