ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳಿಂದ ಕಾಡಾನೆಗಳು ರೈತರೊಬ್ಬರ ತೋಟಕ್ಕೆ ಹಗಲು-ರಾತ್ರಿ ದಾಳಿ ನಡೆಸುತ್ತಿದ್ದು, ಇತ್ತೀಚೆಗೆ ಮತ್ತೊಮ್ಮೆ ಬಂದಿದ್ದು, ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿ, ಅಪಾರ ಮೌಲ್ಯದ ಬೆಳೆ ನಾಶವಾಗಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಾಡಾನೆಗಳು ನುಗ್ಗುತ್ತಿದೆ. ಆನೆ ದಾಳಿಯಿಂದ ಹಲವಾರು ಗಿಡಗಳು ನೆಲಸಮವಾಗಿದ್ದು, ತೋಟದ ಭಾಗಶಃ ಬೇಲಿ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಹಾಗೂ ರೈತರು ಕಾಡಾನೆಗಳ ಅಟ್ಟಹಾಸದಿಂದ ಭಯಭೀತರಾಗಿದ್ದು, ರಾತ್ರಿ ನಿದ್ರೆ ಕಳೆದುಕೊಂಡಿದ್ದಾರೆ.
ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಕಾಡಾನೆ ತೊಲಗಿಸಲು ಮತ್ತು ರೈತ ರಿಚರ್ಡ್ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












