ಕಳಸ: (ನ್ಯೂಸ್ ಮಲ್ನಾಡ್ ವರದಿ) ನಿತ್ಯ ಜಗಳ ಮಾಡುತ್ತಿದ್ದ ಪತ್ನಿಯನ್ನು ಪತಿ ಕಬ್ಬಿಣದ ಪೈಪ್ನಿಂದ ಹೊಡೆದು ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ (32) ಮೃತಪಟ್ಟ ಮಹಿಳೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಯಮಗೊಂಡ ಕಾಫಿತೋಟದ ಕೂಲಿ ಲೈನ್ನಲ್ಲಿ ಮಂಜುಳಾ ಮತ್ತು ಆಕೆಯ ಪತಿ ವಾಸವಿದ್ದು, ನಿತ್ಯ ಜಗಳವಾಡುವುದನ್ನು ನೋಡಿದ ತೋಟದ ರೈಟರ್ ಕೆಲಸಕ್ಕೆ ಬರಬೇಡಿ ಎಂದು ಎಚ್ಚರಿಕೆಯನ್ನು ನೀಡಿದ್ದರು ಎನ್ನಲಾಗಿದೆ. ಕೆಲಸ ಇಲ್ಲದಿದ್ದಾಗ ಗಂಡ-ಹೆಂಡತಿ ಕಲಹ ಮತ್ತಷ್ಟು ಜೋರಾಗಿ ಕಬ್ಬಿಣದ ಪೈಪ್ನಿಂದ ಮಂಜುಳಾ ತಲೆಗೆ ಹೊಡಿದಿದ್ದಾನೆ. ಪತಿಯಿಂದ ಹಲ್ಲೆಗೊಳಗಾಗಿ ರಕ್ತಸ್ರಾವದಿಂದ ಬಳಲುತ್ತಿದ್ದ ಮಂಜುಳಾ ಅವರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












