ಚಿಕ್ಕಮಗಳೂರು: ಚಾಕುವಿನಿಂದ ಇರಿದು ಪತ್ನಿಯನ್ನೇ ಹತ್ಯೆಗೈದ ಪತಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)‌ ಪತಿಯಿಂದಲೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ (34) ಪತಿಯಿಂದ ಕೊಲೆಯಾದ ಮಹಿಳೆ.


ಇದನ್ನೂ ಓದಿ: 10th ಹಾಗೂ PUC ಪಾಸ್‌ ಆದವರಿಗೆ ಜಾಬ್‌ ಆಫರ್; ಆಕರ್ಷಕ ಸಂಬಳ


ಹವ್ವಳ್ಳಿ ಗ್ರಾಮದ ನೇತ್ರಾವತಿ, ಸಕಲೇಶಪುರ ನವೀನ್ ಜೊತೆ ಕಳೆದ 5 ತಿಂಗಳ ಹಿಂದೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲ‌‌ ದಿನಗಳಲ್ಲಿ ಗಂಡನಿಂದ ದೂರವಾದ ನೇತ್ರಾವತಿ, ತನ್ನ ಹವ್ವಳ್ಳಿ ಗ್ರಾಮದ ತವರು ಮನೆ ಸೇರಿದ್ದರು. ಹಿರಿಯರು ರಾಜಿ ಪಂಚಾಯಿತಿ ಮಾಡಿ ಇಬ್ಬರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ನೇತ್ರಾವತಿ ವಿಚ್ಛೇದನ ನೀಡಲು ಸಿದ್ದತೆ ನಡೆಸಿದ್ದರು. ಮೂರು ದಿನಗಳ‌ ಹಿಂದೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪತಿ‌ ನವೀನ್ ವಿರುದ್ಧ ಕಿರುಕುಳದ ದೂರು ನೀಡಿದ್ದರು. ಪೊಲೀಸರು ದೂರು ಸ್ವೀಕರಿಸಿದ್ದರು. ವಿಚ್ಛೇದನ ಮತ್ತು ಪೊಲೀಸರಿಗೆ ದೂರು ನೀಡಿರುವ ವಿಷಯ ತಿಳಿದ ಪತಿ ನವೀನ್ ಪತ್ನಿ ನೇತ್ರಾವತಿಯ ಪ್ರಾಣವನ್ನೇ ತೆಗೆದಿದ್ದಾನೆ.


ಇದನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!


ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ನೇತ್ರಾವತಿ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.


ಇದನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.