ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಅರುಣ್ ಕುಮಾರ್ (31), ಎಸ್. ಶಂಕರ್ (35) ಹಾಗೂ ಲವ (35) ಪ್ರಕರಣ ದಾಖಲಾದ ವ್ಯಕ್ತಿ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ನಿನ್ನೆ ನರಸಿಂಹರಾಜಪುರ-ಶಿವಮೊಗ್ಗ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನರಸಿಂಹರಾಜಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ KA14C2539 ನಂಬರಿನ ಟಾಟಾ ಏಸ್ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ವಾಹನದ ಹಿಂಭಾಗವನ್ನು ಟಾರ್ಪಲ್ ಹಾಗೂ ಹಲಗೆಯಿಂದ ಮುಚ್ಚಿರುವುದನ್ನು ಪೊಲೀಸರು ತೆರೆಯಿಸಿ ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಗಾಳಿ-ಬೆಳಕು ಇಲ್ಲದಂತೆ, ಹುಲ್ಲು-ನೀರು ನೀಡದೆ ಹಿಂಸಾತ್ಮಕ ರೀತಿಯಲ್ಲಿ ತುಂಬಿಕೊಂಡು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಾನುವಾರುಗಳು ಹಾಗೂ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?












