ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಜಯಪುರ ರಸ್ತೆ ತಿರುವಿನ ಬಳಿ ಇಂದು ಬೆಳಿಗ್ಗೆ ಸುಮಾರು 5.15ರ ವೇಳೆಗೆ ಅಕ್ರಮ ಗೋ ಸಾಗಾಟವನ್ನು ಹಿಂದೂ ಕಾರ್ಯಕರ್ತರು ತಡೆದು ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದ ವಂಶಿ ಹಾಗೂ ಪ್ರಜ್ವಲ್ ಎಂಬ ಇಬ್ಬರು ಆರೋಪಿಗಳು ಕುಂಚೂರಿನಿಂದ 4 ಹಸುಗಳು ಹಾಗೂ ಒಂದು ಕರುವನ್ನು ಅಕ್ರಮವಾಗಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ, ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕೊಪ್ಪ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಗೋವುಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.












