ಚಿಕ್ಕಮಗಳೂರು: ಅಕ್ರಮವಾಗಿ ಮರ ಕಡತಲೆ ಸಂಬಂಧ | ಮೂವರು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಅಮಾನತು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಮರ ಕಡತಲೆ ಮಾಡಿರುವ ಪ್ರಕರಣಕ್ಕೆ ಸಂಬಂಧ ಮೂವರು ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಸದ್ದಾಂ ಹುಸೇನ್, ಅರುಣ್ ಹಾಗೂ ಡಿ.ಆರ್.ಎಫ್.ಓ ಸುನೀಲ್ ಅಮಾನತ್ತುಗೊಂಡ ಅಧಿಕಾರಿಗಳು.

 

ಇದನ್ನೂ ಓದಿ; ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ

ಭದ್ರಾ ಅಭಯಾರಣ್ಯ ವ್ಯಾಪ್ತಿಯ ತಣಗೀಬೈಲು, ಅಯ್ಯನಕೆರೆ, ಗುರುಪುರ ಗುಡ್ಡದ ಬೀರನಹಳ್ಳಿ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ, ಬೀಟೆ, ತೇಗದ ಮರಗಳನ್ನು ಕಡಿತಲೆ ಮಾಡಲಾಗಿತ್ತು. ಲಕ್ಷಾಂತರ ಮೌಲ್ಯದ ಮರಗಳ ಕಡತಲೆಯಾಗಿದ್ದು ಹೇಗೆ ಇದರ ಹಿಂದೆ ಅರಣ್ಯಧಿಕಾರಿಗಳ ಕೈವಾಡ ಮತ್ತು ನಿರ್ಲಕ್ಷ್ಯದಿಂದ ಮರಗಳನ್ನು ಕಡಿದು ಸಾಗಿಸಲಾಗಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣದ ಗಂಭೀರತೆ ಅರಿತ ಮೇಲಾಧಿಕಾರಿಗಳು ಈ ಅಮಾನತು ಆದೇಶ ಹೊರಡಿಸಿದ್ದಾರೆ ಆದರೆ ಕೂಡ ಇನ್ನೂ ಕೆಲವು ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ.

ಇದನ್ನೂ ಓದಿ; ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490

ಜಯಪುರ: ಶ್ರೀ ಸದ್ಗುರು ವಿದ್ಯಾ ಸಂಸ್ಥೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಯೂಟ್ಯೂಬರ್ ಅರೆಸ್ಟ್

 

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಬಸರೀಕಟ್ಟೆಯ ಶ್ರೀ ಸದ್ಗುರು ವಿದ್ಯಾ ಸಂಸ್ಥೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಯೂಟ್ಯೂಬರ್ ನನ್ನು ಗ್ರಾಮಸ್ಥರೇ ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ಭಾನುವಾರ ನಡೆದಿದೆ.

ಇದನ್ನೂ ಓದಿ;  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ PM KISAN ಮೊತ್ತ ಏರಿಕೆ

 

ಶನಿವಾರ ಶ್ರೀ ಸದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲೆ ಮತ್ತು ಶ್ರೀ ಸದ್ಗುರು ವಿದ್ಯಾ ಮಂದಿರದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮದ ವೀಡಿಯೋ ರೆಕಾರ್ಡ್ ಮಾಡಲು ಬಂದಿದ್ದ ಬೆಳ್ತಂಗಡಿ ಮೂಲದ ಯೂಟ್ಯೂಬರ್ ಶರತ್ ಕಾರ್ಯಕ್ರಮದ ವಿಡಿಯೋ ರೆಕಾರ್ಡ್ ಮಾಡಿ, ಶಾಲೆಯಲ್ಲಿ ಉಳಿದುಕೊಂಡಿದ್ದ.

ಇದನ್ನೂ ಓದಿ; ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ಕೊನೆಯ ದಿನಾಂಕ ಯಾವಾಗ?

ಶನಿವಾರ ಮದ್ಯ ರಾತ್ರಿ ಶಾಲೆಯ ರೂಮಿನ ಬೀಗ ಮುರಿದು ಒಳ ಪ್ರವೇಶಿಸಿ, ಬೀರುವಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ. ಆಗ ಉಂಟಾದ ಶಬ್ಧ ಆಲಿಸಿದ ಹತ್ತಿರದ ಮನೆಯಲ್ಲಿ ವಾಸವಿದ್ದ ಸಿಬ್ಬಂದಿ ರಾಕೇಶ್ ಹಾಗೂ ಅವರ ಪತ್ನಿ ಭವ್ಯ ಆರೋಪಿಯನ್ನು ಹಿಡಿದು, ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ;  ರೈತರೇ ಗಮನಿಸಿ; ಬರ ಪರಿಹಾರ ಪಡೆಯಲು ಜಸ್ಟ್ ಈ ಕೆಲಸ ಮಾಡಿ

ಘಟನೆ ಮಾಹಿತಿ ಪಡೆದ ಜಯಪುರ ಪಿಎಸೈ ಅಂಬರೀಶ್ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.