
ಚಿಕ್ಕಮಗಳೂರು ನಗರ ಠಾಣಾ ಪೊಲೀಸರು ಅಕ್ರಮ ಮಾದಕ ವಸ್ತುಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು ₹20,000 ಮೌಲ್ಯದ 1.220 ಕೆಜಿ ತೂಕದ ಕ್ಯಾನಾಬಿಸ್ (ಗಾಂಜಾ) ಅನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಇಂದು ಬೆಳಗಿನ ಜಾವ ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯ ಉಂಡೇದಾಸರಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಗಿರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 1.220 ಕೆಜಿ ತೂಕದ ಗಾಂಜಾ ಪತ್ತೆಯಾಗಿದ್ದು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.













