
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಲಮಕ್ಕಿಯಲ್ಲಿರುವ ಕೇರಳ ಹೋಟೆಲ್ ಮೇಲ್ಬಾಗದಲ್ಲಿ ವೈಬ್ ಆ್ಯಂಡ್ ಟ್ರೈಬ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 13 ಮಂದಿ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಎಸ್‌ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಕೊಪ್ಪ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು, ಠಾಣೆಯ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಇಸ್ಪೀಟ್ ಎಲೆಗಳು ಹಾಗೂ ₹13,900 ಹಣ, ಆಟ ಆಡಲು ಬಳಸುತ್ತಿದ್ದ ಟೋಕನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಸ್ಪೀಟ್ ಜೂಜಾಟ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

















