
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ಜನವರಿ 15ರಂದು ನಡೆದಿದೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

₹2,100 ಮೌಲ್ಯದ 3.78 ಲೀಟರ್ ಮದ್ಯ ವಶ:
ಮೊದಲ ಪ್ರಕರಣದಲ್ಲಿ, ಲಕ್ಕವಳ್ಳಿ ಠಾಣಾ ವ್ಯಾಪ್ತಿಯ ರಂಗೇನಹಳ್ಳಿ ಗ್ರಾಮದ ಬರಗೇನಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯ ಸಾಗಿಸುತ್ತಿದ್ದ ಬರಗೇನಹಳ್ಳಿ ಗ್ರಾಮದ ನಿವಾಸಿ ಸುರೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ಬಳಿ ಅಕ್ರಮವಾಗಿ ಹೊಂದಿದ್ದ ₹2,100 ಮೌಲ್ಯದ 3.78 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?
₹2,400 ಮೌಲ್ಯದ 4.23 ಲೀಟರ್ ಮದ್ಯ ವಶ:
ಇನ್ನೊಂದು ಪ್ರಕರಣದಲ್ಲಿ, ಬರಗೇನಹಳ್ಳಿ ಗ್ರಾಮದ ಸಮೀಪದ ಬರಗೇನಹಳ್ಳಿ ರಸ್ತೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಾಗಿಸುತ್ತಿದ್ದ ಅಂದಾನೆಗೌಡ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯ ಬಳಿ ಇದ್ದ ₹2,400 ಮೌಲ್ಯದ 4.23 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















