ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಮಧ್ಯ ವಯಸ್ಸಿನವರಿಗೆ ಅಕ್ರಮವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ನಾಡ ಕಚೇರಿ ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ಪಿ.ಆರ್.ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ನಿರ್ಮಲಾ ಟಿ.ಎಸ್., ಹನುಮಂತಪ್ಪ ಆರ್., ರವಿ ಕೆ.ಆರ್., ಲಿಂಗರಾಜು ಕೆ..ಕಾವ್ಯಾ ಟಿ.ಎಂ., ಕುಮಾರ್ ಜೆ.ಎಂ. ಅವರನ್ನು ಅಮಾನತು ಮಾಡಲಾಗಿದೆ.
ಎನ್.ಕೆ.(ನಾಡ ಕಚೇರಿ)-5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ವರದಿಯಲ್ಲಿ ತಿಳಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಕಡೂರು ತಹಶೀಲ್ದಾರ್ ಇತ್ತೀಚೆಗೆ ಮತ್ತೊಂದು ವರದಿಯನ್ನು ಸಲ್ಲಿಸಿದ್ದು, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಎನ್.ಕೆ.-4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿ ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ
ಈ ಪ್ರಕರಣಗಳಲ್ಲಿ ಯಾವ ಅಧಿಕಾರಿಗಳ ಎಲ್ಲೆಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಯಾರಿಂದ ಎಷ್ಟು ನಷ್ಟ ಆಗಿದೆ ಎಂದು ಕೂಲಂಕಷವಾಗಿ ಪರಿಶೀಲಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್, 8 ಸಿಬ್ಬಂದಿಯನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಈ ಹಿಂದೆಯೇ ಅಮಾನತು ಮಾಡಲಾಗಿತ್ತು.












