ಚಿಕ್ಕಮಗಳೂರು: ಅಕ್ರಮ ರೆಸಾರ್ಟ್ ನಿರ್ಮಾಣ: ಮೌನವಾದ್ರ ಅರಣ್ಯಾಧಿಕಾರಿಗಳು…?

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ಹಾಗೂ ಪರಿಸರ ಸೂಕ್ಷ್ಮ ವಲಯದಲ್ಲಿ ಖಾಸಗಿ ಸಂಸ್ಥೆಯೊಂದು ಅಕ್ರಮವಾಗಿ ಬೃಹತ್ ರೆಸಾರ್ಟ್ ನಿರ್ಮಾಣ ಮಾಡುತ್ತಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕೊಳಗಾವೆ ಗ್ರಾಮದ ಸರ್ವೆ ನಂಬರ್ 53ರಲ್ಲಿ ಈ ರೆಸಾರ್ಟ್ ನಿರ್ಮಾಣವಾಗುತ್ತಿದ್ದು, ಇದಕ್ಕೆ ಕೇಂದ್ರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ. ಪರಿಸರ ಸೂಕ್ಷ್ಮ ವಲಯದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿ ಕಡ್ಡಾಯವಾಗಿದ್ದರೂ, ಯಾವುದೇ ಅನುಮತಿ ಇಲ್ಲದೇ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಅಕ್ರಮ ನಿರ್ಮಾಣದಿಂದ ಭದ್ರಾ ಅರಣ್ಯದ ಹುಲಿಗಳ ವಾಸಸ್ಥಾನಕ್ಕೆ ಮತ್ತು ಅವುಗಳ ಮುಕ್ತ ಸಂಚಾರಕ್ಕೆ ತೀವ್ರ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಅಳಿವಿನ ಅಂಚಿನಲ್ಲಿರುವ ಅನೇಕ ಪಕ್ಷಿ ಹಾಗೂ ಪ್ರಾಣಿ ಸಂಕುಲಗಳ ಅಸ್ತಿತ್ವಕ್ಕೂ ಅಪಾಯ ಎದುರಾಗಲಿದೆ. ಇಷ್ಟೆಲ್ಲಾ ಬೆಳವಣಿಗೆಗಳ ನಡುವೆಯೂ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರ ಒಡೆತನದ ರೆಸಾರ್ಟ್ ಇದಾಗಿರುವುದರಿಂದ ವನ್ಯಜೀವಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂಜರಿದಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ.

ಈ ಕೂಡಲೇ ಅಕ್ರಮ ರೆಸಾರ್ಟ್ ಕಾಮಗಾರಿಯನ್ನು ನಿಲ್ಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವನ್ಯಜೀವಿ ಹಾಗೂ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.