
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಕಲ್ಲು ಬಂಡೆ ಬ್ಲಾಸ್ಟ್ ಮಾಡಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿಯ ಹಲಸುಮನೆ ಬಳಿ ನಡೆದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿಯ ಹಲಸುಮನೆ ಗ್ರಾಮದ ಸಿದ್ದರಹಟ್ಟಿಯ ಕಲ್ಲು ಬಂಡೆಯ ಮೇಲಿರುವ ಇತಿಹಾಸ ಪ್ರಸಿದ್ಧ ಪುರಾತನ ವೀರಭದ್ರೇಶ್ವರ ದೇವಾಲಯ ಬಳಿ ಅಕ್ರಮವಾಗಿ ಕಲ್ಲು ಬಂಡೆ ಬ್ಲಾಸ್ಟ್ ನಿಂದಾಗಿ ದೇವಾಲಯ ಕುಸಿಯುವ ಭೀತಿ ಎದುರಾಗಿತ್ತು.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಸೈಜ್ ಕಲ್ಲುಗಳಿಗಾಗಿ ಕಲ್ಲು ಬಂಡೆ ಬ್ಲಾಸ್ಟ್ ಮಾಡಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಕುರಿತು ಗ್ರಾಮಸ್ಥರು ತಹಶೀಲ್ದಾರ್ ರೇಷ್ಮಾ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ತಹಶಿಲ್ದಾರ್ ರೇಷ್ಮಾ ಅವರಿಂದ ಅಕ್ರಮ ಕಲ್ಲು ಗಣಿಗಾರಿಕೆ ತಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಪತ್ರ ಬರೆದಿದ್ದರು. ತಹಶೀಲ್ದಾರ್ ಪತ್ರ ಬರೆದ ಬೆನ್ನಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಕಲ್ಲು ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಕಲ್ಲು ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಶೃಂಗೇರಿ ರೈತರ ಗಮನಕ್ಕೆ; ವಿವಿಧ ಯೋಜನೆಯಡಿಯಲ್ಲಿ ಸಿಗಲಿದೆ ಸಹಾಯಧನ
















