ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಯಾವುದೇ ಪರವಾನಗಿ ಇಲ್ಲದೆ ಟಿಪ್ಪರ್ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ KA-14 B-4400 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೆಪ್ಟೆಂಬರ್ 7ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಯಾವುದೇ ಪರವಾನಗಿ ಇಲ್ಲದೆ ಟಿಪ್ಪರ್ನಲ್ಲಿ ಸಾಗಿಸುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಕ್ಕಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹಾಗೂ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಾದ ಪುನೀತ್ ಹೊಳೆಕೊಪ್ಪ ಹಾಗೂ ಫಣಿರಾಜ್ ಕಟ್ಟೆಹಕ್ಲು ಅವರನ್ನು ಬಂಧಿಸುವುದು ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ಐ ಮಧು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಕ್ಷ್ಮೀಶ್, ಯುವರಾಜ್ ಮತ್ತು ಪ್ರಕಾಶ್ ಭಾಗವಹಿಸಿದ್ದರು. (ವರದಿ: ಶಶಿ ಬೆತ್ತದಕೊಳಲು)












