ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮಂಡಗದ್ದೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳದಿಂದ 1,888.25 ಕೆ.ಜಿ ತೂಕದ ಅಕ್ಕಿ ಹಾಗೂ ಡಿಜಿಟಲ್ ತೂಕದ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿ ಸೈಯದ್ ಗೌಸ್ ವಿರುದ್ಧ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಓಮ್ಮಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ತಹಶೀಲ್ದಾರ್ ಎಸ್.ರಜಿತ್ ಸೂಚನೆಯ ಮೇರೆಗೆ ಆಹಾರ ಇಲಾಖೆಯ ಶಿರಸ್ತೇದಾರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಕಂದಾಯ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.














