ಕಡೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 10 ಸಾವಿರ ಮೌಲ್ಯದ 6 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ; ಈ ರೀತಿ ಅರ್ಜಿ ಸಲ್ಲಿಸಿ

ಗೋವಾದಿಂದ ಯಶವಂತಪುರಕ್ಕೆ ಕಡೂರು ಮಾರ್ಗವಾಗಿ ತೆರಳುತ್ತಿದ್ದ ವಾಸ್ಕೋಡಿ ಗಾಮ ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 10 ಸಾವಿರ ಮೌಲ್ಯದ 6 ಲೀಟರ್ ಮದ್ಯವನ್ನು ಬೀರೂರಿನ ರೈಲ್ವೆ ನಿಲ್ದಾಣದಲ್ಲಿ ಬುಧವಾರ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ಎಲ್.ಸಿ.ಸಂದೀಪ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿದ್ದು, ಸಿಬ್ಬಂದಿಗಳಾದ ನಾಗೇಂದ್ರ, ಮಂಜುಳಾ, ಉಮೇಶ್, ಈರಪ್ಪ, ಅಶೋಕ್ ಕಾರ್ಯಚರಣೆಯಲ್ಲಿದ್ದರು.
ಇದನ್ನೂ ಓದಿ: ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಉದ್ಯೋಗ; 12,600 ಸಂಬಳ












