ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶೃಂಗೇರಿ ಜಗದ್ಗುರುಗಳು ಬದಲು ಆಡಳಿತಾಧಿಕಾರಿ ಭಾಗಿ

ಶೃಂಗೇರಿ:  (ನ್ಯೂಸ್ ಮಲ್ನಾಡ್ ವರದಿ) ಅಯೋಧ್ಯೆ ಶ್ರೀರಾಮ ಮಂದಿಯರದಲ್ಲಿ ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಶೃಂಗೇರಿ ಜಗದ್ಗುರುಗಳು ಗೈರಾಗಾಲಿದ್ದು, ಮಠದ ಪ್ರತಿನಿಧಿ ಭಾಗಿಯಾಗಲಿದ್ದಾರೆ ಎಂದು ಶೃಂಗೇರಿ ಮಠದ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

 

ಇದನ್ನೂ ಓದಿ; ಏರ್‌ ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಹಿರಿಯ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಹಾಗೂ ರಾಮ ಮಂದಿರ ಟ್ರಸ್ಟ್ ನ ಸದಸ್ಯರು ಆಗಿರುವ ಕಿರಿಯ ಜಗದ್ಗುರು ವಿಧುಶೇಖರ ಭಾರತೀತೀರ್ಥ ಸ್ವಾಮೀಜಿಗಳು ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಗೈರಾಗಾಲಿದ್ದು, ಶೃಂಗೇರಿ ಮಠದ ಆಡಳಿತಾಧಿಕಾರಿ ಗೌರಿಶಂಕರ್ ಅಯೋಧ್ಯೆಗೆ ತೆರಳಲಿದ್ದಾರೆ.

ಇದನ್ನೂ ಓದಿ; ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ

ಸುಳ್ಳು, ಅಪಪ್ರಚಾರಕ್ಕೆ ಕಿವಿಕೊಡದಂತೆ ಕರೆ:
ಇನ್ನು ಅಯೋಧ್ಯೆ ರಾಮ ಮಂದಿರ ಕಾರ್ಯದಲ್ಲಿ ಶೃಂಗೇರಿ ಜಗದ್ಗುರುಗಳು ಭಾಗಿಯಾಗಲಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಸುಳ್ಳು ಸುದ್ದಿ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸಬಾರದು. ಅಯೋಧ್ಯೆಗೂ ಶೃಂಗೇರಿಗೂ ಅವಿನಾಭಾವ ಸಂಬಂಧವಿದೆ. ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದರು.

 

ಇದನ್ನೂ ಓದಿ; ರೈತರೇ ಗಮನಿಸಿ; PM KISAN ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ರಾಮಭುಜಂಗ ಸ್ತೋತ್ರ ಪಠಣ:
ಭಗವಾನ್ ಶ್ರೀರಾಮನ ರಾಮಭುಜಂಗ ಸ್ತೋತ್ರ ಪಠಣ ಮಾಡುವಂತೆ ಕಿರಿಯ ಶ್ರೀಗಳು ನೀಡಿದ್ದು, ಕರೆ ಶಂಕರಾಚಾರ್ಯರು ಪಠಣ ಮಾಡಿರುವ ರಾಮನ ಶ್ಲೋಕದಲ್ಲಿ ಅದ್ಭುತ ಅರ್ಥವಿದೆ. ಕಳೆದ ದೀಪಾವಳಿಯಲ್ಲೇ ರಾಮ ಜಪ ಮಾಡಲು ಹೇಳಿದ್ದೇವೆ. ನಾಸ್ತಿಕರು ಕೂಡ ರಾಮಜಪ ಮಾಡುತ್ತಿದ್ದಾರೆ ಎಂದರು.

 

ತೀರ್ಥಹಳ್ಳಿ: ಪ್ರತ್ಯೇಕ ಪ್ರಕರಣ; ಯುವತಿ ಹಾಗೂ ವೃದ್ಧೆ ಆತ್ಮಹತ್ಯೆ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಾಸನಕೊಡಿಗೆಯಲ್ಲಿ ನಡೆದಿದೆ. ಸುಶ್ಮಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಮಾನಸಿಕ ಖಿನ್ನತೆಯಿಂದ ಮಂಗಳವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸುಶ್ಮಿತಾ ದಾಸನಕೊಡಿಗೆಯ ವಿದ್ಯಾರ್ಥ್ ಎಂಬುವವರನ್ನು ಕಳೆದ 10 ತಿಂಗಳ ಹಿಂದೆ ವಿವಾಹವಾಗಿದ್ದರು. ಫಾರೆಸ್ಟ್ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥ್ ಮಂಗಳವಾರ ಕೆಲಸಕ್ಕೆ ಹೋಗಿರುವ ವೇಳೆ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ದೆ:
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆ ಹಕ್ಕಲು ಸಮೀಪದ ಹುಲ್ಕುಳಿ ಬಳಿ ವೃದ್ಧೆ ಒಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಕಟಗಾರು ಸಮೀಪ ಸರ್ಕಾರಿ ಕೆರೆಯಲ್ಲಿ ಶವ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದ್ದು, ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.