ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣಗಳಲ್ಲಿ ಸೇವೆಗಳ ಜೊತೆ ಆಮಿಷಗಳು ಇರುತ್ತವೆ. ನಿಜವಾದ ಸೇವೆಗಳು ಕಾಣುವುದು ಹಳ್ಳಿಗಳಲ್ಲಿ ಮಾತ್ರ. ಗ್ರಾಮೀಣ ಭಾಗದ ಮನುಷ್ಯ ಸಂಬಂಧವನ್ನು ನಗರಗಳಿಗೆ ತಿಳಿಸುವ ಕಾರ್ಯ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ತೇಜಸ್ವಿನಿ ಅನಂತ ಕುಮಾರ್ ಹೇಳಿದರು.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಶನಿವಾರ ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದರೊಂದಿಗೆ ಪರಿಸರವನ್ನು ಸಂರಕ್ಷಿಸಬೇಕು. ಅಡುಗೆ ಮನೆ ಪಾಕ ಶಾಲೆಯು ಹೌದು. ಪಾಠಶಾಲೆಯು ಹೌದು. ಇಲ್ಲಿ ಉತ್ಪತ್ತಿಯಾಗುವ ಕಸದ ಪ್ರಮಾಣ ಕಡಿಮೆಯಾಗಬೇಕು. ಪಶ್ಚಿಮ ಘಟ್ಟದ ಪರಿಸರ ಮಾಲಿನ್ಯ ಸಮಸ್ಯೆ ಇಲ್ಲ. ಆದರೆ, ಇದು ಮುಂದೆ ಉಂಟಾಗದಂತೆ ಈಗಿನಿಂದಲೇ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್ ಮಾತನಾಡಿ, ಕರಾವಳಿ ಜಿಲ್ಲೆಯ ಜನರು ಅತ್ಯಂತ ಪ್ರಾಮಾಣಿಕರು. ಇಂತಹ ಕಡೆ ನಡೆಯುತ್ತಿರುವ ಈ ಆಸ್ಪತ್ರೆ ಉತ್ತಮ ಉದ್ದೇಶಗಳನ್ನು ಹೊಂದಿರುವುದು ಶ್ಲಾಘನೀಯ. ಕಟ್ಟ ಕಡೆಯ ಮನುಷ್ಯನಿಗೂ ಸೇವೆ ಸಿಗಬೇಕಾದರೆ ಹಳ್ಳಿಗಳಲ್ಲಿ ವೈದ್ಯಕೀಯ ಸೇವೆ ಇನ್ನಷ್ಟು ಗಟ್ಟಿಗೊಳ್ಳಬೇಕು ಎಂದರು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಪಶ್ಚಿಮ ಘಟ್ಟ ತಪ್ಪಲಿನ ಹಾಗೂ ಮೇಲಿನ ಭಾಗದ ಜನರಿಗೆ ಇಂದಿಗೂ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಲಹೆ, ಚಿಕಿತ್ಸೆ ಪಡೆಯುವುದು ದುಸ್ತರದ ಸಂಗತಿಯಾಗಿ ಉಳಿದಿದೆ. ಕಚ್ಚಾ ರಸ್ತೆಗಳಲ್ಲಿ ವಾಹನ ಅಪಘಾತಗಳು, ಕೃಷಿ ಕೆಲಸದ ಸಂದರ್ಭ ಎದುರಾಗುವ ಅನಾಹುತಗಳು, ವನ್ಯಜೀವಿ ದಾಳಿ ಹೀಗೆ ವೈದ್ಯಕೀಯ ತುರ್ತು ಪರಿಸ್ಥಿತಿಗಳು ಸದಾ ನಿರ್ಮಾಣವಾಗುತ್ತವೆ. ಕೆಲವು ಗುಡ್ಡಗಾಡು ಪ್ರದೇಶಗಳಲ್ಲಿ ನಡೆಯಲು ಸಾಧ್ಯವಿಲ್ಲದ ಅಶಕ್ತರಿಗೆ, ಆಸ್ಪತ್ರೆಗೆ ಬರಲು ಸಾಧ್ಯವಿಲ್ಲದ ರೋಗಿಗಳಿಗೆ ನಮ್ಮ ಶ್ರೀ ಕೃಷ್ಣ ಯೋಗಕ್ಷೇಮ ಅಂಬುಲೆನ್ಸ್ ಮೂಲಕ ವೈದ್ಯಕೀಯ ಸಿಬ್ಬಂದಿಗಳು ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡಿದ್ದೇವೆ.

ಚಾರ್ಮಾಡಿ ಘಾಟಿ ಹಾಗೂ ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂದರ್ಭ ನಮ್ಮ ಆಸ್ಪತ್ರೆ ಸೇವೆಯನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿದೆ ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ ಹೇಳಿದರು.

ಎಂಜೆ ಶ್ರೀಕೃಷ್ಣ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಡಾ.ತೇಜಸ್ವಿನಿ ಅನಂತ ಕುಮಾರ್ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರವನ್ನು ಉದ್ಘಾಟಿಸಿದರು.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಮುರಳಿಕೃಷ್ಣ ಇರ್ವತ್ರಾಯ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ. ವಂದನಾ ಎಂ. ಇರ್ವತ್ರಾಯ, ಕೆಎಂಸಿ ಜನಸಂಪರ್ಕಧಿಕಾರಿ ರಾಕೇಶ್, ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ರೀಜನಲ್ ಚೀಫ್ ಆಪರೇಟಿಂಗ್ ಆಫೀಸರ್ ಸಗೀರ್ ಸಿದ್ದಿಕಿ, ಕೆಎಂಸಿ ಆಸ್ಪತ್ರೆ ಮಂಗಳೂರು ಇಲ್ಲಿನ ಎಮರ್ಜೆನ್ಸಿ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಜೀಧು ರಾಧಾಕೃಷ್ಣನ್, ಎಸ್ ಕೆ ಆರ್ ಡಿ ಪಿ ಧರ್ಮಸ್ಥಳ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಧರ್ಮಸ್ಥಳ ದೇವಳದ ಮಣೆಗಾರ ವಸಂತ ಮಂಜಿತ್ತಾಯ, ಸಮಾಜ ಸೇವಕರು ಚಾರ್ಮಾಡಿ ಹಸೆನಬ್ಬ, ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಹಾಗೂ ಮೂಡಿಗೆರೆ ಹೊಯ್ಸಳ ಆಸ್ಪತ್ರೆಯ ನಿರ್ದೇಶಕರು, ಹಾಗೂ ವೈದ್ಯರು, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶಾರದಾ, ಸೈಂಟ್ ಥೋಮಸ್‌ ಪ್ರೌಢ ಶಾಲೆ, ನೆರಿಯ ಇಲ್ಲಿನ ಮುಖ್ಯ ಶಿಕ್ಷಕಿ ತ್ರೇಸಿಯಾ ಕೆ. ಪಿ, ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.