ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜಯ ಭಾರತೀ ವಿದ್ಯಾಲಯದಲ್ಲಿ ಶ್ರೀ ಶಾರದಾ ಪೀಠಂ, ಶೃಂಗೇರಿ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನ ಹಾಗೂ ಶಾಲಾ ವಾರ್ಷಿಕ ಶೈಕ್ಷಣಿಕ ಸೌಲಭ್ಯಗಳ ಉದ್ಘಾಟನಾ ಸಮಾರಂಭವನ್ನು ಇಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ. ಹೆಚ್.ಜಿ. ಲಕ್ಷ್ಮೀನಾರಾಯಣ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಾಗೂ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಸೌಲಭ್ಯಗಳ ಉದ್ಘಾಟಕರಾಗಿ ಶ್ರೀಮಠ, ಶೃಂಗೇರಿಯ ಅಕೌಂಟ್ಸ್ ಅಂಡ್ ಫೈನಾನ್ಸ್ ವಿಭಾಗದ ಜನರಲ್ ಮ್ಯಾನೇಜರ್ ಶ್ರೀ ಸತೀಶ್ ಭಾಗವಹಿಸಿದರು. ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರೀ ಶಾರದಾ ಪೀಠಂ ನೀಡುತ್ತಿರುವ ಸಹಾಯದ ಮಹತ್ವವನ್ನು ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ವಿನಯ್ ಸಿ.ಜಿ. ಕಾರ್ಯಕ್ರಮದ ಔಚಿತ್ಯವನ್ನು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಶಾಲೆಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ಶ್ರೀ ಸತೀಶ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅವನಿ ಕಾರ್ಯಕ್ರಮವನ್ನು ನಿರೂಪಿಸಿದರೆ, ಸಾವರ್ಣಿ ಸ್ವಾಗತಿಸಿದರು ಹಾಗೂ ಅನಘ ವಂದಿಸಿದರು.












