ಶೃಂಗೇರಿ: ವಿವಿಧ ಸಂಘಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿ ಸಚಿವ ಸಂಪುಟ ಪ್ರಮಾಣವಚನ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನೆಮ್ಮಾರಿನಲ್ಲಿ ಶುಕ್ರವಾರ ವಿವಿಧ ಸಂಘಗಳ ಉದ್ಘಾಟನೆ ಹಾಗೂ ನೂತನ ವಿದ್ಯಾರ್ಥಿ ಸರ್ಕಾರದ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪುಟ್ಟಪ್ಪ ಹೆಗ್ಗಡೆ ಅವರು ವಿವಿಧ ಸಂಘಗಳ ನಾಮಫಲಕಗಳನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪನ್ಯಾಸಕರಾದ ಹೆಚ್. ಎ. ಪ್ರಕಾಶ್ ಅವರು ನೂತನ ವಿದ್ಯಾರ್ಥಿ ಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ತಮ್ಮ ಗುರಿಯತ್ತ ಶಿಸ್ತು, ಶ್ರದ್ಧೆ ಹಾಗೂ ಏಕಾಗ್ರತೆಯಿಂದ ಮುನ್ನಡೆಯಬೇಕು. ದೊರೆಯುವ ಪ್ರತಿಯೊಂದು ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶಶಿಕಲಾ ಶಂಕ್ರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕರಾದ ಶ್ರೀನಾಥ್, ನಿವೃತ್ತ ಕನ್ನಡ ಭಾಷಾ ಶಿಕ್ಷಕರಾದ ಛಲಪತಿ, ಶಿಕ್ಷಕರಾದ ಮಂಜಯ್ಯ, ಶಾಹೀನ್ ತಾಜ್, ರೇಷ್ಮಾ, ಅಂಬಿಕಾ ಹೊಳ್ಳ, ತಸ್ಬಿಯಾ ಬಾನು, ವಿಜಯಲಕ್ಷ್ಮೀ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಭಾಷಾ ಶಿಕ್ಷಕರಾದ ಸುಬ್ರಹ್ಮಣ್ಯ ಭಟ್ ಅವರು ಕಾರ್ಯಕ್ರಮ ನಿರೂಪಿಸಿದರೆ, ಸರೋಜಾದೇವಿ ಅವರು ಧನ್ಯವಾದ ಸಮರ್ಪಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.