ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ. ಅರಣ್ಯ ಇಲಾಖೆ ವಿರುದ್ಧ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕಿಡಿ ಕಾರಿದ್ದಲ್ಲದೇ ತನಿಖೆಗೆ ಆದೇಶಿಸಿದ್ದಾರೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಫೋರ್ ವೀಲ್ ರ್ಯಾಲಿ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯ ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಜೀಪ್ ರ್ಯಾಲಿ ನಡೆದಿತ್ತು. ಸುಮಾರು 80 ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಸಿಸಿಎಫ್ ದರ್ಜೆಯ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ












