
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಹಾಗೂ ತರೀಕೆರೆ ವ್ಯಾಪ್ತಿಯಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಆರೋಪಿಗಳನ್ನು ತರೀಕೆರೆ ಉಪವಿಭಾಗದ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ತರೀಕೆರೆ ಉಪವಿಭಾಗದ ಡಿ.ವೈ.ಎಸ್.ಪಿ ಹೆಚ್. ಪರಶುರಾಮಪ್ಪ, ಹಾಗೂ ಕಡೂರು ವೃತ್ತದ ಸಿ.ಪಿ.ಐ ರಫೀಕ್ ಎಂ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟು ₹30.13 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸ್ವತ್ತಿನಲ್ಲಿ ಸುಮಾರು 186.350 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ಕಾರು ಸೇರಿವೆ. ವಿಚಾರಣೆ ವೇಳೆ ಆರೋಪಿಗಳು ಚಿಕ್ಕಮಗಳೂರು ಜಿಲ್ಲೆ ಮಾತ್ರವಲ್ಲದೆ ಮೈಸೂರು, ಗದಗ, ಹುಬ್ಬಳ್ಳಿ ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಕಳ್ಳತನ ಕೃತ್ಯಗಳನ್ನು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಪವನ್ ಕುಮಾರ್ ಸಿ.ಸಿ., ಧನಂಜಯ್ ಡಿ.ಎಚ್.,ವಿದ್ಯಾ ಕೆ.ಜೆ., ತಿಪ್ಪೇಶ್ ಡಿ.ವಿ., ಮಂಜುಳಾಬಾಯಿ ಸೇರಿದಂತೆ ಸಿಬ್ಬಂದಿಗಳಾದ ಮಧುಕುಮಾರ್ ಜಿ.ಕೆ., ಸ್ವಾಮಿ ಎ.ಓ., ಹರೀಶ್ ಬಿ.ಸಿ., ಮಹಮ್ಮದ್ ರಿಯಾಜ್, ದೇವರಾಜ್ ಎ.ಎಸ್., ಅರುಣ್ ಕುಮಾರ್, ರಾಜಪ್ಪ ಬಿ.ಎಚ್. ಮತ್ತು ಮಂಜಪ್ಪ ಭಾಗವಹಿಸಿದ್ದರು.
ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್
















