ಚಿಕ್ಕಮಗಳೂರು: ಅಂತರ್ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಹಲವು ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಇದೇ 24 ಹಾಗೂ 25 ರಂದು ಶಿವಮೊಗ್ಗ ಪ್ರೇರಣಾ ಆಡಿಟೋರಿಯದಲ್ಲಿ ನಡೆದ ಅಂತರ್ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ


ಹರಿಹರಪುರ ಸಚ್ಚಿದಾನಂದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್, ಸಂತ ಜೋಸೆಫ್ ಸ್ಕೂಲಿನ ವಿದ್ಯಾರ್ಥಿಗಳಾದ ಮುರಳಿ, ಕಶ್ಯಪ್, ವರ್ಷಿಣಿ, ಹಾಗೂ ಬಾಳೆಹೊನ್ನೂರು ಬಿ. ಜಿ. ಎಸ್ ಶಾಲೆಯ ವಿದ್ಯಾರ್ಥಿಗಳು ಸುರಾಗ್ ಕೆ. ಆರ್, ಸ್ಕಂದ, ಮಂತನ್ ಇವರುಗಳು ಅಂತರ್ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ.


ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಕರ್ನಾಟಕದ ಪ್ರಸಿದ್ಧ ಕರಾಟೆ ಸಂಸ್ಥೆಯಾದ ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಮುಖ್ಯ ಶಿಕ್ಷಕರಾದ ವಾಮನ ಪಾಲನ್ ಹಾಗೂ ಸಹಶಿಕ್ಷಕರಾದ ಶ್ರೇಯಸ್ ಇವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್; ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ…!


ಸಂತ ಜೋಸೆಫ್ ಸ್ಕೂಲಿನ ವಿದ್ಯಾರ್ಥಿ ಕಶ್ಯಪ್ ಜಿ. ಆರ್’ಗೆ 1 ಚಿನ್ನದ ಪದಕ, 1 ಬೆಳ್ಳಿಯ ಪದಕ:
ಅಂತರ್ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸಂತ ಜೋಸೆಫ್ ಸ್ಕೂಲಿನ ವಿದ್ಯಾರ್ಥಿ ಕಶ್ಯಪ್ ಜಿ. ಆರ್’ಗೆ 1 ಚಿನ್ನದ ಪದಕ ಹಾಗೂ 1 ಬೆಳ್ಳಿಯ ಪದಕ ಪಡೆದಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗುಣವಂತೆ ಮೆಡಿಕಲ್ ರಾಜಶೇಖರ್ ಜಿ. ಎಸ್ ಹಾಗೂ ಕವಿತಾ ದಂಪತಿಗಳ ಪುತ್ರರಾಗಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.