ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಒಂದು ದಿನ ಸ್ವಲ್ಪ ಕಡಿಮೆಯಾಗಿದ್ದ ಮಳೆಯ ಅಬ್ಬರ ಇಂದು ಇನ್ನಷ್ಟು ಹೆಚ್ಚಾಗಿದ್ದು, ಗಾಳಿ-ಮಳೆ ಆರ್ಭಟ ಜೋರಾಗಿದೆ. ಭಾರೀ ಗಾಳಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿರಾರು ಮರಗಳು ಧರೆಗುರುಳಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ಮರಗಳು ರಸ್ತೆ ಬದಿಯ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಡಿತಗೊಂಡಿದೆ.
ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ವಾರಗಳು ಕಳೆಯುತ್ತಿದ್ದು, ಜನ ಮೊಬೈಲ್ ಚಾರ್ಜ್ ಸೇರಿದಂತೆ ಇತರ ವಿದ್ಯುತ್ ಅಗತ್ಯತೆಗೆ ಪರದಾಡುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಕೃತಕ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಆರಂಭಿಸಿದ್ದಾರೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ಮಾಡಿಕೊಡಲಾಗುತ್ತಿದೆ. ಜನರು ನಾ ಮುಂದು-ತಾ ಮುಂದು ಎಂದು ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳಲು ಮುಗಿಬೀಳುತ್ತಿದ್ದು, ದರ ಕೂಡ ನಿಗದಿ ಮಾಡಲಾಗಿದೆ.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಿಕೊಡಲು 60 ರೂಪಾಯಿ ಹಾಗೂ ಅರ್ಧ ಚಾರ್ಜ್ ಮಾಡಿಕೊಡಲು 40 ರೂಪಾಯಿ ನಿಗದಿ ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಗ್ರಾಮ ಹಾಗೂ ಪರ ಗ್ರಾಮದ ಯುವಕರು ಗುಂಪು ಗುಂಪಾಗಿ ಬಂದು ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ
ವಿಪರ್ಯಾಸವೆಂದರೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ತವರಲ್ಲಿಯೇ ಮೊಬೈಲ್ ಚಾರ್ಜ್ಗೂ ದುಬಾರಿ ಹಣ ನೀಡುವಂತಾಗಿದೆ.
ಇದನ್ನೂ ಓದಿ: ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಶೇ.50 ರಷ್ಟು ಸಹಾಯಧನ; ಕೂಡಲೇ ಅರ್ಜಿ ಸಲ್ಲಿಸಿ












