ಐಪಿಎಲ್ ಬೆಟ್ಟಿಂಗ್: ಐವರು ಆರೋಪಿಗಳ ಬಂಧನ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವೊಂದನ್ನು ಶಿವಮೊಗ್ಗದ ವಿನೋಬನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರಿನಲ್ಲಿ ಕುಳಿತು ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ಕಟ್ಟುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಆರ್.ಎಂ.ಸಿ ಯಾರ್ಡ್ ಸಮೀಪ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಕೆಲವರು ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ವಿನೋಬನಗರ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪಿ.ಎಸ್.ಐ ನೇತೃತ್ವದ ಪೊಲೀಸ್ ತಂಡ ತಕ್ಷಣವೇ ಸ್ಥಳಕ್ಕೆ ದಾಳಿ ನಡೆಸಿತು.

ದಾಳಿಯ ವೇಳೆ ಐವರು ಯುವಕರು ‘ಕ್ರಿಕ್ ಲೈನ್ ಗುರು’ ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರಿಂದ ₹35 ಸಾವಿರ ನಗದು, 7 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಮಹೀಂದ್ರಾ XUV 300 ಕಾರು ಸೇರಿದಂತೆ ಒಟ್ಟು ₹6.35 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.