ಹಾಸನಂಬೆ ದೇವಿ ದರ್ಶನಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ನಿನ್ನೆ ತೆರೆದಿದ್ದು, ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ


ನಾಳೆ 6 ಗಂಟೆಯಿಂದ 7 ಗಂಟೆಯವರೆಗೂ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಆದರೆ ನಾಳೆ ಸರದಿ ಸಾಲು ಆರು ಗಂಟೆಗೆ ಮೊದಲೇ ಆರಂಭವಾಗುತ್ತದೆ. ಮತ್ತು ಸಂಜೆ 4 ಗಂಟೆಗೆ ಸರತಿ ಸಾಲಿಗೆ ನಿಲ್ಲುವುದನ್ನು ಬಂದ್ ಮಾಡಿ ಏಳು ಗಂಟೆಯವರೆಗೂ ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಕಾರಣ ಅದರ ನಂತರ ದೇವಾಲಯದ ಶಾಸ್ತ್ರಗಳಿಗೆ ಅನುವು ಮಾಡಿಕೊಡಬೇಕಾಗಿ ಎಂದು ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.

11ನೇ ತಾರೀಖು ಬೆ.06 ಗಂಟೆಗೆ ಆರಂಭವಾದರೆ 22ನೇ ತಾರೀಖು ಸಂಜೆ 07 ಗಂಟೆಯವರೆಗೆ ದರ್ಶನ ಮುಂದುವರೆಯುತ್ತದೆ. ಆದರೆ ನೈವೇದ್ಯ ಮತ್ತು ಅಲಂಕಾರ, ಪೂಜಾ ಕೈಂಕರ್ಯಕ್ಕೆ ಆ ಸಮಯವನ್ನು ಮೀಸಲಿಡ ಬೇಕಾಗಿರುವುದರಿಂದ, ಪ್ರತಿದಿನ ಮುಂಜಾನೆ 02 ರಿಂದ 05 ವರೆಗೆ ಮತ್ತು ಮಧ್ಯಾಹ್ನ 02 ರಿಂದ 03.30 ಗಂಟೆವರೆಗೆ ದೇವಾಲಯ ತೆರೆದಿದ್ದರೂ ಈ ಸಮಯದಲ್ಲಿ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದರು.


ಇದನ್ನೂ ಓದಿ: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಸಿಗಲಿದೆ ಪಿಂಚಣಿ ಸೌಲಭ್ಯ, ಕಂಪ್ಲೀಟ್‌ ಡಿಟೈಲ್ಸ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ


ವಸ್ತ್ರ ಸಂಹಿತೆ ಜಾರಿ:
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58 ರಂತೆ ಹಾಸನ ಜಿಲ್ಲೆ ಹಾಸನ ಟೌನ್ ಶ್ರೀ ಹಾಸನಾಂಬ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ದೇವಾಲಯದ ಗರ್ಭಗುಡಿಗೆ ಪ್ರವೇಶಿಸಲು ಪುರುಷರು ಪಂಚೆ, ದೋತಿಯಂತಹ ಅಥವಾ ಪೈಜಾಮದಂತಹ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರದಂತಹ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಾತ್ರ ಅವಕಾಶ ಕಲ್ಪಿಸುವುದು. ಯಾವುದೇ ರೀತಿಯ ಕರ್ತವ್ಯ ನಿರತ ಸಿಬ್ಬಂದಿಗಳು ಸಮವಸ್ತ್ರ, ಸಹಿತವಾಗಿ ಗರ್ಭಗುಡಿ ಪ್ರವೇಶಿಸಲು ಅವಕಾಶವಿರುವುದಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.