ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಕಾರ್ಯಕ್ರಮ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಸಾರ್ವಜನಿಕರ ಅಹವಾಲು ಸಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.

 

ಇದನ್ನೂ ಓದಿ; ಬ್ಯೂರೋ ಆಫ್‌ ಇಂಡಿಯನ್ ಸ್ಟ್ಯಾಂಡರ್ಡ್‌ ನಲ್ಲಿ ಉದ್ಯೋಗಾವಕಾಶ; 107 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿಗೆ ಬೇಕಾದ ಡಿಟೈಲ್ಸ್ ಇಲ್ಲಿದೆ

ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಿಸಲಾಗಿದೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌; ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ

ಪ್ರತಿ ತಾಲ್ಲೂಕುಗಳಲ್ಲಿ ಅರ್ಜಿ ಸ್ವೀಕಾರ:
ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಸಾರ್ವಜನಿಕ ಹಾಗೂ ವೈಯಕ್ತಿಕ ಅರ್ಜಿಗಳನ್ನು ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಛೇರಿ ಮತ್ತು ತಾಲ್ಲೂಕು ಪಂಚಾಯಿತಿ ಕಛೇರಿಗಳಲ್ಲಿ ದಿನಾಂಕ: 06-01-2024 ರ ಸಂಜೆ 5.30 ರವರೆಗೆ ಅರ್ಜಿಗಳನ್ನು ಸ್ವೀಕರಿಸಿ, ವೈಯಕ್ತಿಕ ಅರ್ಜಿಗಳನ್ನು ಮತ್ತು ಸಾರ್ವಜನಿಕವಾಗಿ ಸಲ್ಲಿಸುವ ಅರ್ಜಿಗಳನ್ನು ಪ್ರತ್ಯೇಕ ವಹಿಗಳಲ್ಲಿ ನೋಂದಾಯಿಸಿ ಹಾಗೂ ಸದರಿ ಅರ್ಜಿಗಳನ್ನು ಗಣಕೀಕರಣಗೊಳಿಸಿ ಸಂಬಂಧಪಟ್ಟ 1 ಅರ್ಜಿದಾರರುಗಳಿಗೆ ಕ.ಸಂ. 1 ರಿಂದ ಟೋಕನ್ ಗಳನ್ನು ತಾಲೂಕುವಾರು ನೀಡುವುದು.

 

ದಿನಾಂಕ:07- 01-2024 ರಂದು ವೈಯಕ್ತಿಕ ಅರ್ಜಿಗಳನ್ನು ಮತ್ತು ಸಾರ್ವಜನಿಕ ಅರ್ಜಿಗಳನ್ನು ಇಲಾಖಾವಾರು ಟೋಕನ್ ನಂಬರ್ ನೊಂದಿಗೆ ಪ್ರತ್ಯೇಕಿಸುವುದು ಹಾಗೂ ಸ್ವೀಕೃತಗೊಂಡ ಅರ್ಜಿಗಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತರಲು ಸೂಚಿಸಿದೆ.

ದಿನಾಂಕ:08-01-2024 ರಂದು ಸಪ್ತಗಿರಿ ಕನ್ವೆನ್ಟನ್ ಹಾಲ್, ಎನ್ ಹೆಚ್ ರಸ್ತೆ ತರೀಕೆರೆ ಇಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಕಾರ್ಯಕ್ರಮಕ್ಕೆ ನುರಿತ ಕಂಪ್ಯೂಟರ್ ಆಪರೇಟರ್ ಮತ್ತು ಮೇಲುಸ್ತುವಾರಿಗೆ ಶಿರಸ್ತೆದಾರ್ ರನ್ನು ಮತ್ತು ತಾಲ್ಲೂಕು ಪಂಚಾಯಿತಿಯಿಂದ ಸಹಾಯಕ ನಿರ್ದೇಶಕರು ಲ್ಯಾಪ್ ಟಾಪ್ ಹಾಗೂ ಡೋಂಗಲ್ ನೊಂದಿಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 8.00 ಗಂಟೆಗೆ ತಾಲ್ಲೂಕಿಗೆ ಸಂಬಂಧಿಸಿದಂತೆ ಬರುವ ಅರ್ಜಿಗಳನ್ನು ಸ್ವೀಕರಿಸಿ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನೊಂದಾಯಿಸಿ ಅರ್ಜಿದಾರರುಗಳಿಗೆ ಟೋಕನ್ ಗಳ ವಿತರಣೆ ಮಾಡಿ ಬಂದಂತಹ ಅರ್ಜಿಗಳನ್ನು ಪ್ರತ್ಯೇಕಿಸಿ ಕಾರ್ಯಕ್ರಮದಲ್ಲಿ ನೀಡಲು ತಿಳಿಸಿದೆ.

 

ಶೃಂಗೇರಿ: ರಾಜ್ಯ ಸರ್ಕಾರಿ ನೌಕರರ ಸಂಘದ 2024 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕು ಘಟಕದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘ 2024 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಇದನ್ನೂ ಓದಿ; ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?

ಬುಧವಾರ ತಾಲ್ಲೂಕು ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಶೃಂಗೇರಿ ತಾಲ್ಲೂಕು ತಹಸೀಲ್ದಾರ್ ಗೌರಮ್ಮ, ನೌಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಯ್ಕ್ ಎಸ್, ಸಂಘದ ಕಾರ್ಯದರ್ಶಿ ಶಶಿಧರ್, ರಾಜ್ಯ ಪರಿಷತ್ ಸದಸ್ಯರಾದ ರವೀಂದ್ರ MB, ಖಜಾಂಚಿ ಸೋಮಯ್ಯ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್, ವೆಂಕಟೇಶ್ BM, ಯಮನಪ್ಪ ತಳವಾರ್ ಹಾಗೂ ನಿರ್ದೇಶಕರಾದ ಅಶ್ವಿನಿ,ADLR ನಂದೀಶ್, ಶಿಕ್ಷಣ ಇಲಾಖೆಯ ಬಸವರಾಜ್, ಕೊಪ್ಪ ವಿಭಾಗದ ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಂದೀಶ್ CL, ತಾಲ್ಲೂಕು ವೈದ್ಯಾಧಿಕಾರಿಗಳಾದ ಆಡಿ ದಯಾನಂದ್, ವಲಯ ಅರಣ್ಯಧಿಕಾರಿಗಳಾದ ಅನಿಲ್ ಡಿಸೋಜಾ, ಜೂನಿಯರ್ ಕಾಲೇಜ್ ನ ಪ್ರಚಾರ್ಯರಾದ ಅರುಣ್ ಕುಮಾರ್ ಹಾಗೂ ತಾಲ್ಲೂಕು ಪಂಚಾಯ್ತಿಯ ಸಹಾಯಕ ನಿರ್ದೇಶಕರಾದ ಸುದೀಪ್ ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಯ ನೌಕರರು ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.