ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶೃಂಗೇರಿಯ ಜಯಭಾರತೀ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 2025 – 26ನೇ ಶೈಕ್ಷಣಿಕ ಸಾಲಿನ ಪ್ರತಿಭಾ ಕಾರಂಜಿಯಲ್ಲಿ ಶೃಂಗೇರಿಯ ಜಯಭಾರತೀ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ತೆಲಗು, ಇಂಗ್ಲಿಷ್, ಮರಾಠಿ ಭಾಷಣ ಸ್ಪರ್ಧೆ ಹಾಗೂ ಶಾಂತಿವನ ಟ್ರಸ್ಟ್,(ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಆಯೋಜನೆಯ ಚಿತ್ರಕಲಾ ಹಾಗೂ ಭಾಷಣ ಸ್ಪರ್ಧೆಯಲ್ಲಿ ಜಯಭಾರತೀ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳಾದ 9ನೇ ತರಗತಿ ವಿದ್ಯಾರ್ಥಿನಿ ಅವನಿ ಕೆ. ಎಸ್. ಇಂಗ್ಲಿಷ್ ಭಾಷಣ ಸ್ಪರ್ಧೆ ಹಾಗೂ ಶಾಂತಿವನ ಟ್ರಸ್ಟ್ (ರಿ), ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನಪಥ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರದಲ್ಲಿ ಏರ್ಪಡಿಸಲಾದ ಭಾಷಣ ಸ್ಪರ್ಧೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ ಎಂ. ಪಿ ಶಾಂತಿವನ ಟ್ರಸ್ಟ್ರ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನಪಥ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕ ಅಧ್ಯಯನ ಆಧಾರದಲ್ಲಿ ಏರ್ಪಡಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿ ಕೆ. ಮದನ್ ಕುಮಾರ್ ತೆಲುಗು ಭಾಷಣ ಸ್ಪರ್ಧೆಯಲ್ಲಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪ್ರೀತಂ ಎಸ್. ಎನ್ ಮರಾಠಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ, ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ

ಈ ಎಲ್ಲಾ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ವಿನಯ್ ಸಿ. ಜಿ ಅವರು ಹಾಗೂ ಎಲ್ಲಾ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.