ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಗೆ ಅಪಘಾತ ಮಾಡಿರುವ ಕುರಿತು ಪ್ರಶ್ನಿಸಲು ಹೋದ ವ್ಯಕ್ತಿ ಮೇಲೆ ಪಿಕಪ್ ವಾಹನ ಹತ್ತಿಸಿ ಅಪಘಾತ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಪೇಟೆಗದ್ದೆ ಪ್ರವೀಣ್ (34) ಪಿಕಪ್ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ವ್ಯಕ್ತಿ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಸ್ನೇಹಿತನ ಬೈಕ್ ಗೆ ಅಪಘಾತ ಮಾಡಿರುವ ಕುರಿತು ಪ್ರಶ್ನಿಸಲು ಹೋದ ವೇಳೆ ಪಿಕಪ್ ಚಾಲಕ ಪ್ರವೀಣ್ʼನ ಬೈಕ್ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಪ್ರವೀಣ್ʼನ ಕಾಲು ಹಾಗೂ ಮೈಕೈಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಈ ಘಟನೆ ಕುರಿತು ಅಪಘಾತ ಮಾಡಿರುವ ಮೂಡಿಗೆರೆ ತಾಲೂಕಿನ ಪಿಕಪ್ ಚಾಲಕ ಆಸೀಪ್ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ












