ಜಯಪುರ: ನಾಳೆ ಮಕ್ಕಿಕೊಪ್ಪ ಗೆಳೆಯರ ಬಳಗದಿಂದ ‘ಪುನೀತ ನಮನ’ ಕಾರ್ಯಕ್ರಮ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಳೂರು ಗ್ರಾಮ ಮಕ್ಕಿಕೊಪ್ಪ ಗೆಳೆಯರ ಬಳಗ ಇವರ ವತಿಯಿಂದ ಕರ್ನಾಟಕ ರತ್ನ ಡಾ|| ಪುನೀತ್ ರಾಜಕುಮಾರ್ ಸ್ಮರಣಾರ್ಥ “ಪುನೀತ್ ನಮನ” ಕಾರ್ಯಕ್ರಮವನ್ನು 03-12-2023 ನೇ ಭಾನುವಾರ ಮಕ್ಕಿಕೊಪ್ಪ ವೃತ್ತದಲ್ಲಿ ನಡೆಸಲಾಗುವುದು ಎಂದು ಕಾರ್ಯಕ್ರಮದ ಸಂಚಾಲಕ ಇಸ್ಮಾಯಿಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಕಾರ್ಯಕ್ರಮದ ಅಂಗವಾಗಿ ಶೃಂಗೇರಿ ಕ್ಷೇತ್ರ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯನ್ನು ಹಾಗೂ ಸ್ಥಳೀಯರಿಗೆ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿದ್ದು, ಸಂಜೆ 7:00 ಯಿಂದ ಶಾನ್ ಇವೆಂಟ್ಸ್ ಅರ್ಪಿಸುವ ಹೆಸರಾಂತ ಕಲಾವಿದರ ಕೊಡುವಿಕೆಯಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಪುನೀತ್ ಅಭಿಮಾನಿಗಳು, ಕನ್ನಡ ಅಭಿಮಾನಿಗಳು, ಸಂಗೀತ ಅಭಿಮಾನಿಗಳು, ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ

ಇನ್ನು ಪತ್ರಿಕಾಗೋಷ್ಠಿಯಲ್ಲಿ ಗೆಳೆಯರ ಬಳಗದ ಸದಸ್ಯರುಗಳಾದ ಸೈನುದ್ದಿನ್, ಲ್ಯಾನ್ಸಿ ಡಿಮೆಲೊ, ಮುಸ್ತಫ, ಆರಿಫ್, ಸುಬ್ರಹ್ಮಣ್ಯ ಇದ್ದರು.

 

ಚಿಕ್ಕಮಗಳೂರು: ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹೆಲ್ಮೆಟ್ ಹಾಕದ ಕಾರಣಕ್ಕೆ ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಎನ್ನುವರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ.

 

ಇದನ್ನೂ ಓದಿ; FID ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ FID ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಏನಿದು ಘಟನೆ:
ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನ ಮೇಲೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿ ಈಗಾಗಲೇ ಪಿಎಸ್ ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪೊಲೀಸರ ದೌರ್ಜನ್ಯದಿಂದ ವಕೀಲ ಪ್ರೀತಂ ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿದೆ. ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ; ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?

ಮುಖ್ಯನ್ಯಾಯಮೂರ್ತಿಯಿಂದ ಅಸಮಾಧಾನ:
ಹೆಲ್ಮೆಟ್ ಹಾಕದ ಕಾರಣಕ್ಕೆ ಅಮಾನುಷ ಹಲ್ಲೆ ಆಘಾತಕಾರಿ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್. ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಕೀಲರಿಗೇ ಹೀಗಾದರೆ ಜನಸಾಮಾನ್ಯರ ಕಥೆ ಏನು? ಹೆಲ್ಮೆಟ್ ಹಾಕದ ಕಾರಣಕ್ಕೆ ಹೀಗೆ ಹಲ್ಲೆ ನಡೆಸಬಹುದೇ? ಎಂದು ಪ್ರಶ್ನಿಸಿದ ಹೈಕೋರ್ಟ್, ಈ ಪ್ರಕರಣದ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.