ಜಯಪುರ: (ನ್ಯೂಸ್ ಮಲ್ನಾಡ್ ವರದಿ) 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಸುಪ್ರೀತಾ (13) ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿನಿ.
ಊಟ ಮಾಡುವಾಗ ಅನ್ನ ಚೆಲ್ಲಿದ್ದ ಹಿನ್ನೆಲೆಯಲ್ಲಿ ತಾಯಿ ಮಗಳಿಗೆ ಬುದ್ಧಿವಾದ ಹೇಳಿದ್ದಾರೆ. “ಬರೀ ಟಿವಿ ನೋಡು ಓದಬೇಡ ಚೆಲ್ಲಿದ ಅನ್ನ ಕ್ಲೀನ್ ಮಾಡು” ಎಂದು ತಿಳಿಸಿದ್ದಾರೆ. ಬಳಿಕ ತಾಯಿ ಕೆಲಸಕ್ಕೆ ತೆರಳಿದ್ದು, ತಾಯಿ ಮನೆಯಿಂದ ಹೊರಟ ಬಳಿಕ, ಬಾಲಕಿ ಮನೆಯಲ್ಲೇ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.












