ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜೆ.ಸಿ.ಬಿ.ಎಂ ಕಾಲೇಜಿಗೆ ವಾಣಿಜ್ಯ ವಿಭಾಗದ ವಿ. ಶ್ವೇತಾ 587 ಹಾಗೂ ಕಲಾ ವಿಭಾಗದ ಪ್ರಣ್ವೀತ್ 584 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ವಿಜ್ಞಾನ ವಿಭಾಗದಲ್ಲಿ 588 ಅಂಕ ಪಡೆದು ಎಚ್. ಎ ಸುಮೇಧಾ ಕಾಲೇಜಿಗೆ ಪ್ರಥಮ ಪಡೆದಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

103 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ್ದು, ಶೇ 97 ಫಲಿತಾಂಶ ಬಂದಿದೆ. ಮಾರ್ಚ್ 2025 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಜರಾದ 315 ವಿದ್ಯಾರ್ಥಿಗಳ ಪೈಕಿ 305 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97 ಫಲಿತಾಂಶ ಬಂದಿದೆ. 103 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 188 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ
ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ದ್ವಿತೀಯ PU ಫಲಿತಾಂಶದಲ್ಲಿ ನಿಮ್ಮ ಜಿಲ್ಲೆಗೆ ಯಾವ ಸ್ಥಾನ?













