ಶೃಂಗೇರಿ ಕ್ಷೇತ್ರದ ಜೆಡಿಎಸ್ ಪಕ್ಷದ ನಾಯಕ ಹೃದಯಾಘಾತದಿಂದ ನಿಧನ

ಎನ್ ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಕ್ಷೇತ್ರದ ಜೆಡಿಎಸ್ ಪಕ್ಷದ ನಾಯಕ ಮಡಬೂರು ಹೆಚ್. ಟಿ ರಾಜೇಂದ್ರ (72) ಹೃದಯಾಘಾತದಿಂದ ನಿನ್ನೆ 8:30ರ ಸುಮಾರಿಗೆ ನಿಧನರಾಗಿದ್ದಾರೆ.


ಇದನ್ನೂ ಓದಿ: 36,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಪಕ್ಷ ಕಟ್ಟುವಲ್ಲಿ ಮುಂಚೂಣಿ, ದೇವೇಗೌಡರ ಕುಟುಂಬಕ್ಕೂ ಆಪ್ತ

ಮೂಲತಃ ಎನ್ ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ಹೆಚ್ ಟಿ ರಾಜೇಂದ್ರ ಅವರು, ಹೆಚ್ ಡಿ ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ರು. ಇದಲ್ಲದೆ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜವಾಬ್ದಾರಿಯೂ ರಾಜೇಂದ್ರ ಅವರ ಹೆಗಲ ಮೇಲಿತ್ತು. ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬಲಪಡಿಸುವಲ್ಲಿ ಸಾಕಷ್ಟು ಶ್ರಮಿಸಿದ್ದರು. ಒಂದು ಬಾರಿ ಜಿಲ್ಲಾ ಪಂಚಾಯಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಸಚಿವ ಗೋವಿಂದೇಗೌಡ ಅವರ ಕಾಲದಿಂದಲೂ ಜೆಡಿಎಸ್ ನಲ್ಲಿ ಸಕ್ರಿಯರಾಗಿದ್ದ ಹೆಚ್ ಟಿ ರಾಜೇಂದ್ರ, 2008 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಡಿಬಿ ಚಂದ್ರೇಗೌಡ ಅವರ ಎದುರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಅನಾರೋಗ್ಯದ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ

ಕಳೆದ 2 ವರ್ಷದಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಹೆಚ್ ಟಿ ರಾಜೇಂದ್ರ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದ್ರೆ ನಿನ್ನೆ (ಭಾನುವಾರ) ಸುಮಾರು 8 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ವೈದ್ಯರು ರಾಜೇಂದ್ರ ಅವರು ಹೃದಯಾಘಾತದಿಂದ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!


ಹೆಚ್ ಟಿ ರಾಜೇಂದ್ರ ನಿಧನಕ್ಕೆ ಸಂತಾಪ

ಹೆಚ್ ಟಿ ರಾಜೇಂದ್ರ ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರೂ ರಾಜಕೀಯ ವಲಯದಲ್ಲಿ ಅಜಾತಶತ್ರು ಎನ್ನಿಸಿಕೊಂಡಿದ್ದರು. ಹೆಚ್ ಟಿ ರಾಜೇಂದ್ರ ನಿಧನಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಶಾಸಕ ಟಿ ಡಿ ರಾಜೇಗೌಡ, ಮಾಜಿ ಸಚಿವ ಜೀವರಾಜ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಮಾಜಿ ಸಚಿವ ದಿವಂಗತ ಗೋವಿಂದೇಗೌಡರ ಕಾಲದಿಂದಲೂ ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಹೆಚ್ ಟಿ ರಾಜೇಂದ್ರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಆಪ್ತ ವಲಯದಲ್ಲಿ ಸಹ ಗುರುತಿಸಿಕೊಂಡಿದ್ದರು. ಹೆಚ್ ಟಿ ರಾಜೇಂದ್ರ ಅವರ ನಿಧನಕ್ಕೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಈ ಕುರಿತಂತೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಮ್ಮ ಪಕ್ಷದ ನಾಯಕರಾದ ಹೆಚ್ ಟಿ ರಾಜೇಂದ್ರ ಅವರ ನಿಧನದ ಸುದ್ದಿ ತಿಳಿದು ಆಘಾತವಾಗಿದೆ. ರಾಜೇಂದ್ರ ಜೆಡಿಎಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು. ಪಕ್ಷ, ಸಂಘಟನೆ ಕಟ್ಟುವಲ್ಲಿ ತಮ್ಮಮ್ಮ ತಾವು ಸಮರ್ಪಿಸಿಕೊಂಡಿದ್ದರು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಗಮನಕ್ಕೆ; ಗೌರವಧನ ಪಾವತಿಗೆ ಅನುದಾನ ಬಿಡುಗಡೆ


ಹುಟ್ಟೂರಿನಲ್ಲಿ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ಅವಕಾಶ

ಸಾರ್ವಜನಿಕರಿಗೆ ಬೆಳಿಗ್ಗೆ 11.30 ರ ವರೆಗೆ ಅಂತಿಮ ದರ್ಶನಕ್ಕೆ ಅವರ ಸ್ವಗೃಹ ಮಡಬೂರಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂತರ ಎನ್ ಆರ್ ಪುರ ದಲ್ಲಿರುವ ಒಕ್ಕಲಿಗ ಸಂಘದ ಶ್ರೀ ಶಾರದಾ ವಿದ್ಯಾ ಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 11 :30 ರಿಂದ ಮಧ್ಯಾಹ್ನ 3:30 ರ ವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ನಂತರ ಸಂಜೆ 5 ಗಂಟೆಗೆ ಮಡಬೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.