ಕಾಂಗ್ರೆಸ್ ಆಡಳಿತದಲ್ಲಿ ರೈತರ ಸಮಸ್ಯೆಗಳಿಗೆ ಮುಕ್ತಿ ಯಾವಾಗ?

ಮೂಡಿಗೆರೆ:(ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ರೈತರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಾಲೂಕಿನ ಜನರ ಸಮಸ್ಯೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಕಾಫಿ ಸೇರಿದಂತೆ ವಿವಿಧ ಉಪಬೆಳೆಗಳನ್ನು ಅವಲಂಬಿಸಿರುವ ಸಾವಿರಾರು ರೈತ ಕುಟುಂಬಗಳು ಹವಾಮಾನ ವೈಪರೀತ್ಯ, ಬೆಲೆ ಕುಸಿತ, ಸಾಲದ ಹೊರೆ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಸಂಕಷ್ಟ ಎದುರಿಸುತ್ತಿವೆ. ರೈತರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ–ಸಕ್ರಮ ಸಮಿತಿ ರಚನೆಯಾಗಿದ್ದರೂ ಸಭೆ ನಡೆಸದಿರುವುದರಿಂದ ಫಾರಂ ನಂ.50, 53 ಹಾಗೂ 57ರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ. 94ಸಿ ಅರ್ಜಿಗಳ ವಿಲೇವಾರಿಗೂ ವೇಗ ನೀಡಬೇಕು. ಸಮಸ್ಯೆಗಳನ್ನು ಶೀಘ್ರ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಎಚ್ಚರಿಸಿದರು.

ಜೆಡಿಎಸ್ ಮುಖಂಡ ವಿಜಯಕುಮಾರ್ ಮಾತನಾಡಿ, ರೈತರು ಹಾಗೂ ಬಡಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಕೊನೆಗೊಳ್ಳಬೇಕು ಎಂದರು. ವರ್ಷಗಳಿಂದ ಬಾಕಿ ಉಳಿದಿರುವ ಕಂದಾಯ ಮತ್ತು ಜಮೀನು ಸಂಬಂಧಿತ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಹಿರಿಯ ಮುಖಂಡ ಗಬ್ಬಳ್ಳಿ ಚಂದ್ರೇಗೌಡ ಮಾತನಾಡಿ, ಸಹಕಾರ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡುವ ಭರವಸೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು. ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದ್ದು, ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂದು ದೂರಿದರು.

ಫಾರಂ ನಂ.53 ಹಾಗೂ 94ಸಿ ಅರ್ಜಿಗಳ ತ್ವರಿತ ವಿಲೇವಾರಿ, ಸರ್ಕಾರಿ ಜಮೀನುಗಳ ಸಮಸ್ಯೆಗಳ ಪರಿಹಾರ ಮತ್ತು ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಶಾಶ್ವತ ಮುಕ್ತಿ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಾಂಗ್ರೆಸ್ ಆಡಳಿತದಲ್ಲಿ ರೈತರ ಸಮಸ್ಯೆಗಳಿಗೆ ಮುಕ್ತಿ ಯಾವಾಗ?

ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತಾಲೂಕಿನ ರೈತರು ಹಾಗೂ ಜನಸಾಮಾನ್ಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಜ್ವಲಂತ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿ ನಿರೀಕ್ಷಿತ ಸ್ಪಂದನೆ ಕಾಣುತ್ತಿಲ್ಲ. ಕಾಫಿ ಹಾಗೂ ಇತರ ಉಪಬೆಳೆಗಳನ್ನೇ ಅವಲಂಬಿಸಿರುವ ಸಾವಿರಾರು ರೈತ ಕುಟುಂಬಗಳು ಹವಾಮಾನ ವೈಪರೀತ್ಯ, ಬೆಲೆ ಕುಸಿತ, ಸಾಲದ ಹೊರೆ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿವೆ. ರೈತರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಿ ಪರಿಹಾರ ಕಲ್ಪಿಸಬೇಕು ಎಂದರು.

ಅಕ್ರಮ–ಸಕ್ರಮ ಸಮಿತಿ ರಚನೆಯಾಗಿದ್ದರೂ ಸಭೆ ನಡೆಸದ ಕಾರಣ ಫಾರಂ ನಂ.50, 53 ಹಾಗೂ 57ರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ. 94ಸಿ ಅರ್ಜಿಗಳ ವಿಲೇವಾರಿಗೂ ವೇಗ ನೀಡಬೇಕು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಜೆಡಿಎಸ್ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಜೆಡಿಎಸ್ ಮುಖಂಡ ವಿಜಯಕುಮಾರ್ ಮಾತನಾಡಿ, ರೈತರು ಹಾಗೂ ಬಡಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬದಲಾಗಬೇಕು. ವರ್ಷಗಳಿಂದ ಬಾಕಿ ಉಳಿದಿರುವ ಕಂದಾಯ ಹಾಗೂ ಜಮೀನು ಸಂಬಂಧಿತ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಜನರಿಗೆ ನ್ಯಾಯ ಒದಗಿಸಬೇಕು. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ ರೈತರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯುವವರೆಗೆ ಜೆಡಿಎಸ್ ಹೋರಾಟ ಮುಂದುವರಿಸಲಿದೆ ಎಂದರು.

ಜೆಡಿಎಸ್ ಹಿರಿಯ ಮುಖಂಡ ಗಬ್ಬಳ್ಳಿ ಚಂದ್ರೇಗೌಡ ಮಾತನಾಡಿ, ಸಹಕಾರ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಗ್ಯಾರಂಟಿ ಯೋಜನೆಗಳ ಪರಿಣಾಮ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಾಗಿದ್ದು, ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಫಾರಂ ನಂ.53 ಹಾಗೂ 94ಸಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸರ್ಕಾರಿ ಜಮೀನುಗಳ ಸಮಸ್ಯೆ ಬಗೆಹರಿಸಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಶಾಶ್ವತ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ.ಸುರೇಶ್, ತಾಲೂಕು ಅಧ್ಯಕ್ಷ ಲಕ್ಷ್ಮಣ್‌ಗೌಡ, ಜ್ವಾಲನಯ್ಯ ಕಳಸ, ರವಿ ವಸ್ತಾರೆ, ಎಂ.ಸಿ.ಹೂವಪ್ಪ, ಝಕರಿಯಾ ಜಾಕೀರ್,ತುಡುಕುರು ಮಂಜು, ಲೋಹಿತ್ ಬಿದರಹಳ್ಳಿ, ಅರೆಕುಡಿಗೆ ಶಿವಣ್ಣ, ರಘು ಉದುಸೆ, ರುದ್ರೇಗೌಡ,ಸಂಪತ್, ನಿಡಗೂಡು ಚಂದ್ರೇಗೌಡ, ಸುದೀಪ್ ನಂದಿಪುರ, ಮಂಜುನಾಥ್ ಬೆಟ್ಟಗೆರೆ, ಸೇರಿದಂತೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ. ಸುರೇಶ್, ತಾಲೂಕು ಅಧ್ಯಕ್ಷ ಲಕ್ಷ್ಮಣ್‌ಗೌಡ, ಜ್ವಾಲನಯ್ಯ ಕಳಸ, ರವಿ ವಸ್ತಾರೆ, ಎಂ.ಸಿ. ಹೂವಪ್ಪ, ಝಕರಿಯಾ ಜಾಕೀರ್, ತುಡುಕುರು ಮಂಜು, ಲೋಹಿತ್ ಬಿದರಹಳ್ಳಿ, ಅರೆಕುಡಿಗೆ ಶಿವಣ್ಣ, ರಘು ಉದುಸೆ, ರುದ್ರೇಗೌಡ, ಸಂಪತ್, ನಿಡಗೂಡು ಚಂದ್ರೇಗೌಡ, ಸುದೀಪ್ ನಂದಿಪುರ, ಮಂಜುನಾಥ್ ಬೆಟ್ಟಗೆರೆ ಸೇರಿದಂತೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.