ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ದನ ಅಡ್ಡ ಬಂದು ಸ್ಕೂಟಿಯಲ್ಲಿ ಬಿದ್ದಿದ್ದ ಗಾಯಾಳುವನ್ನು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪಟ್ಟಣದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಹರಿಹರಪುರ ಹೋಬಳಿಯ ಹೊಸಕೊಪ್ಪ ಗ್ರಾಮ ಪಂಚಾಯಿತಿಯ ವಾಸಿಯಾಗಿರುವ ಮಹಿಳೆಯೊಬ್ಬರ ಮಗನಾದ ಚೇತನ್ ಕೆಲಸ ಮುಗಿಸಿ ರಾತ್ರಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ದನ ಅಡ್ಡ ಬಂದ ಕಾರಣ ಸ್ಕೂಟಿಯಲ್ಲಿ ಬಿದ್ದು ಅಪಘಾತವಾಗಿತ್ತು. ಅದೇ ರಸ್ತೆಯಲ್ಲಿ ಬರುತ್ತಿದ್ದ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರು ಯುವಕನನ್ನು ಶೃಂಗೇರಿಯ ತಾಲೂಕು ಆಸ್ಪತ್ರೆಗೆ ತನ್ನದೇ ಕಾರಿನಲ್ಲಿಯೇ ಕರೆದುಕೊಂಡು ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇದರೊಂದಿಗೆ ಶೃಂಗೇರಿ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾದ ಭರತ್ ಗಿಣಿಕಲ್ ಹಾಗೂ ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆ, ಕೊಪ್ಪದ ಸಂಘಟನಾ ಕಾರ್ಯದರ್ಶಿ ಸುಧೀರ್ ರವರು ಭೇಟಿ ನೀಡಿ ಯುವಕನ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಮೂಡಿಗೆರೆ: ಎರಡು ವರ್ಷದ ಹಿಂದೆ ಕಳವು ಮಾಡಿದ ಆರೋಪಿ ಬಂಧನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022 ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ನಲ್ಕೆ ಗ್ರಾಮದ ಶರತ್ ಬಂಧಿತ ಆರೋಪಿ
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ. ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿದ್ದ. ನಂತರ ಕಳಸದ ಹೆಮ್ಮಕ್ಕಿಯ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಇತ್ತೀಚೆಗೆ ಒಂದು ಸಿಮ್ ಖರೀದಿ ಮಾಡಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ; ಏನಿದೆ ಹೈಕೋರ್ಟ್ ಆದೇಶ
ಈ ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್, ಸಚಿನ್, ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು.












