ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿಯಲ್ಲಿ ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿದ್ದು, ಆರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ

ಕೇರಳ ಮೂಲದ ಶಾಲೆಯೊಂದು ಟ್ರಾವೆಲ್ ಏಜೆನ್ಸಿ ಮೂಲಕ ಮಕ್ಕಳನ್ನು ಚಿಕ್ಕಮಗಳೂರು ಪ್ರವಾಸಕ್ಕೆ ಕರೆತಂದಿತ್ತು. ಗಿರಿ ಶ್ರೇಣಿಗೆ ದೊಡ್ಡ ಬಸ್ಗಳ ಪ್ರವೇಶ ಕಠಿಣವಾಗಿರುವುದರಿಂದ, ಬಸ್ ನಿಲ್ಲಿಸಿ ಮಕ್ಕಳನ್ನು ಜೀಪ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದಾಗಿ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಬರಿಗೊಂಡ ಜೀಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಗೊಂಡ ಆರು ಮಕ್ಕಳನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












