
ಶೃಂಗೇರಿ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ಸೆ.22ರಂದು ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶೃಂಗೇರಿಯ ಜ್ಞಾನಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಚೆಸ್ ವಿಭಾಗದಲ್ಲಿ ಕೀರ್ತಿ ಎನ್. ಹಾಗೂ ಶ್ರೀ ಸೌಮ್ಯ ಆರ್., ಬ್ಯಾಡ್ಮಿಂಟನ್ ವಿಭಾಗದಲ್ಲಿ ಯೋಗೀಶ್ ಎಸ್. ಬಾಗೂರ್ ಹಾಗೂ ಟೈಕ್ವಾಂಡೋ ವಿಭಾಗದಲ್ಲಿ ವಿಹಾ ಎನ್.ಎಲ್. ಅವರು ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ವೇಳೆ ಟೈಕ್ವಾಂಡೋ ವಿಭಾಗದಲ್ಲಿ ಆರಿಕಾ ಜೈನ್ ಎ.ಎಸ್., ಸಮೇತ ಎಚ್.ಟಿ., ಕೃಷ್ಣ ಪಿ. ಸಾಲಿಯಾನ್ ಹಾಗೂ ಮನ್ವಿತ್ ಎಂ. ಅವರು ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಬ್ಯಾಡ್ಮಿಂಟನ್ ವಿಭಾಗದಲ್ಲಿ ಪುನೀತ್ ಎಸ್.ಕೆ. ದ್ವಿತೀಯ ಬಹುಮಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜ್ಞಾನಂ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.














