ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಏ.30 ರವರೆಗೆ ರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ!; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಶಿವಮೊಗ್ಗ ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು, ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಗ್ರಾಮೀಣ ಪ್ರದೇಶಗಳಿಗೆ ಇ-ಖಾತಾಕ್ಕೆ ಹೊಸ ನಿರ್ಧಾರ!; ಏನದು? ಇಲ್ಲಿದೆ ನೋಡಿ
ಜೋಗ ಕಾಮಗಾರಿಯು ಜಲಪಾತದ ಮುಖ್ಯದ್ವಾರದ ಕಾಲ ಪೂರ್ಣಗೊಳಿಸಬೇಕಿದ್ದು, ಮಿತಿಯೊಳಗೆ ಕಾಮಗಾರಿ ಅನುಷ್ಠಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜ.1 ರಿಂದ ಮಾ.15 ರವರೆ ಮುಚ್ಚಲಾಗಿರುತ್ತದೆ. ಮಾ.15 ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೆ ಇರುವುದರಿಂದ ಏ.30 ರವರೆಗೆ ಮುಚ್ಚಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಆರ್ಭಟ!; ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್?
ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಚಿನ್ನದ ಬಾಂಡ್ ಪ್ರತಿ ಯೂನಿಟ್ʼಗೆ 8,624 ನಿಗದಿಪಡಿಸಿದ RBI; ಹೇಗೆ ಅರ್ಜಿ ಸಲ್ಲಿಸಬೇಕು?












