ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ; ರೈತರೇ ಗಮನಿಸಿ; FID ಮಾಡಿಸಲು ಇಂದು ಕೊನೆಯ ದಿನಾಂಕ; ಎಫ್.ಐ.ಡಿ ಎಲ್ಲಿ ಮಾಡಿಸಬೇಕು, ಯಾವುದೆಲ್ಲಾ ದಾಖಲೆಗಳು ಬೇಕು?

ಪಂಚನಹಳ್ಳಿ ಪೊಲೀಸ್ ಠಾಣೆ ಮತ್ತು ತಂಡ, ಮೋಟಾರ್ ಸೈಕಲ್ ಕಳವು ಮಾಡಿದ್ದ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪತ್ತೆ ಮಾಡಿ, ಬೈಕ್ ಸೇರಿದಂತೆ ಕಡೂರಿನಲ್ಲಿ ಕಳವು ಮಾಡಿದ್ದ ಇನ್ನೊಂದು ಮೋಟಾರ್ ಸೈಕಲ್ ಒಟ್ಟು ಎರಡು ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಮೂಡಿಗೆರೆ: ಚಲಿಸುತ್ತಿದ್ದ ಟ್ರಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ | ಕಾರು ಚಾಲಕ ಗಂಭೀರ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಟ್ರಾಕ್ಟರ್ ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಮುತ್ತಿಗೆಪುರ ಪ್ರೌಢಶಾಲೆ ಬಳಿ ನಡೆದಿದೆ. ಬೇಲೂರು ತಾಲ್ಲೂಕು ಚೀಕನಹಳ್ಳಿ ಮೂಲದವರಾದ ಕೀರ್ತಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕ.
KA-34 M. 1708 ನಂಬರಿನ ಮಾರುತಿ 800 ಕಾರೊಂದು ಟ್ರಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಚಾಲಕ ಕಾರೊಳಗೆ ಸಿಲುಕಿಕೊಂಡು ಹೊರತೆಗೆಯಲು ಸ್ಥಳೀಯರು ಮತ್ತು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಚಾಲಕನ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಎಂ.ಜಿ. ಎಂ. ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












