ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ರಾಜ್ಯ ಸಂಘ ಹಸಿರು ಸೇನೆ ನೂತನ ಅಧ್ಯಕ್ಷರಾಗಿ ಬಿ.ಆರ್ ರವಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

ಹೀರೆನಲೂರು ಗೌಡನ ಕಟೆಹಳ್ಳಿ ಅಧ್ಯಕ್ಷರು ರವಿ ಜಿ.ಆರ್, ದೇವರಾಜ ಬೀರೂರು ಟೌನ್ ಅಧ್ಯಕ್ಷರು ರುದ್ರೇಶ್ ಬಿ.ಎಮ್, ಕಸಾಬ ಕಡೂರು ತುಕುವನಹಳ್ಳಿ ಭಾರತ ಅಧ್ಯಕ್ಷರು ಹಾಗೂ ಸೋಮಣ್ಣ ಕಾರ್ಯದರ್ಶಿ ಹಾಗೂ ಎಲ್ಲಾ ರೈತ ಭಾಂಧವರು ಸದಸ್ಯರುಗಳು ಇದ್ದರು.
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಸದ್ಯ ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮರವಂಜಿ ಗ್ರಾಮದಲ್ಲಿ ಭಾನುವಾರ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿ ಸೇವಿಸಿದ ಕೆಲವರಲ್ಲಿ ಸೋಮವಾರ ವಾಂತಿ-ಭೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡರು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.












