ಕಡೂರು: (ನ್ಯೂಸ್ ಮಲ್ನಾಡ್ ವರದಿ) ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್; ಮಿಸ್ ಮಾಡ್ದೆ ಈ ಸುದ್ದಿ ಓದಿ

ಡಾ.ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, 2023 ರಿಂದ ಕಡೂರು ತಾಲೂಕು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2020 ರಿಂದ 2023ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
1995 ರಿಂದ ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕಾನೂನು ಬದ್ದ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಜಾಬ್ ಆಫರ್; 10th, PUC ವಿದ್ಯಾರ್ಹತೆ, 19,000 ಸಂಬಳ
ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: 7,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ ನೋಡಿ













