ಕಡೂರು: ಶಾಸಕರ ಆಪ್ತ ಸಹಾಯಕರಿಂದ ಕಿರಕುಳ ಆರೋಪ; ನಾಪತ್ತೆ ಆಗಿದ್ದ ಸರ್ಕಾರಿ ನೌಕರ ಪತ್ತೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ)ಶಾಸಕರ ಆಪ್ತ ಸಹಾಯಕ ಹಾಗೂ ವಿವಿಧ ಸರ್ಕಾರಿ ಅಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿರುವುದಾಗಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರನೊಬ್ಬ ಕೊನೆಗೂ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಡೆದಿದೆ.

ಕಡೂರು ತಾಲೂಕು ಕಚೇರಿಯಲ್ಲಿ ಸಾಂಖ್ಯಿಕ ನಿರೀಕ್ಷಕ ಇಕ್ಬಾಲ್‌ ಎಂಬುವವರು ಕೆಲ ದಿನಗಳ ಹಿಂದೆ ದಿಢೀ‌ರ್ ನಾಪತ್ತೆಯಾಗಿದ್ದರು. ನಾಪತ್ತೆಯಾಗುವ ಮೊದಲು ಅವರು ಬರೆದಿದ್ದ ಪತ್ರದಲ್ಲಿ, ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್ ಸೇರಿದಂತೆ ನಾಲ್ವರು ಅಧಿಕಾರಿಗಳು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಇಕ್ಬಾಲ್ ಅವರ ಪತ್ರದಲ್ಲಿ ಶಾಸಕರ ಪಿಎ ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾ‌ರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ಹಾಗೂ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಈ ನಾಲ್ವರು ಕೆಲಸ ಮಾಡಲು ಬಿಡದೇ ಒತ್ತಡ ಹೇರುತ್ತಿದ್ದು, ಪ್ರತೀ ತಿಂಗಳು 25,000 ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಸ್ಫೋಟಕ ಆರೋಪವೂ ಪತ್ರದಲ್ಲಿದೆ.

ಈ ಹಿನ್ನಲೆ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪೋಲಿಸರು ತನಿಖೆ ಆರಂಭಿಸಿದರು. ಮೊಬೈಲ್‌ ಲೋಕೆಶನ್‌ ಮತ್ತು ಮಾಹಿತಿಯ ಆಧಾರದ ಮೇಲೆ ಹುಡುಕಾಟ ನಡೆಸಿದ್ದರು. ಈ ವೇಳೆ ಇಕ್ಬಾಲ್‌ ಅವರು ಚಿಕ್ಕಮಗಳೂರಿನ ವಿಜಯಪುರದಲ್ಲಿರುವ ತಮ್ಮ ಮನೆಯಲ್ಲಿ ಇರುವುದು ಪತ್ತೆಯಾಗಿದೆ. ಪೋಲಿಸರು ವಶಕ್ಕೆ ಪಡೆದು, ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ

ಈ ಪ್ರಕರಣಕ್ಕೆ ಮತ್ತೊಂದು ತಿರುವು ಇರುವುದಾಗಿ ತಿಳಿದುಬಂದಿದ್ದು,ಇಕ್ಕಬಾಲ್‌ ಅವರು ಈ ಹಿಂದೆ ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನಲೆ ಹೊಂದಿದ್ದಾರೆ. ಪ್ರಸ್ತುತ ಆರೋಪಗಳ ಸತ್ಯಾಸತ್ಯತೆ ಪೋಲಿಸ್‌ ತನಿಖೆಯಿಂದ ಹೊರಬೇಕಿದೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಮಾನಸಿಕ ಕಿರುಕುಳದ ಗಂಭೀರ ಆರೋಪಗಳು ಕೇಳಿಬಂದಿವೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.